ಲಾಹೋರ್: ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ದಾಳಿ ನಡೆಸಬಹುದು ಎಂಬ ಭೀತಿಯಲ್ಲಿರುವ ಪಾಕಿಸ್ತಾನ ತನ್ನ ಕ್ಷಿಪಣಿ ಪರೀಕ್ಷೆಗೆ ಮುಂದಾಗಿದೆ. ತನ್ನ ವಿಶೇಷ ಆರ್ಥಿಕ ವಲಯದೊಳಗಿನ ಕರಾಚಿ ಕರಾವಳಿಯಲ್ಲಿ ಮೇಲ್ಮೈಯಿಂದ ಮೇಲ್ಮೈಗೆ ನೆಗೆಯುವ ಕ್ಷಿಪಣಿ ಪರೀಕ್ಷೆಯನ್ನು ನಡೆಸಲು ಕ್ರಮ ಕೈಗೊಂಡಿರುವುದಾಗಿ ರಕ್ಷಣಾ ಮೂಲಗಳನ್ನು ಆಧರಿಸಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸಿಂಧೂ ಜಲ ಒಪ್ಪಂದ ರದ್ದು ಮತ್ತು ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸಲು ಭಾರತ ಮುಂದಾಗುತ್ತಿದ್ದಂತೆ ಪಾಕಿಸ್ತಾನ ಸರ್ಕಾರ ಉನ್ನತ ಮಟ್ಟದ ಭದ್ರತಾ ಸಭೆಯನ್ನು ನಡೆಸಲಿದೆ ಎಂದು ಪಾಕಿಸ್ತಾನದ ಉಪ ಪ್ರಧಾನಿ ಇಶಾಕ್ ದಾರ್ ಘೋಷಿಸಿದ ಕೆಲವೇ ಗಂಟೆಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಸಭೆಯಲ್ಲಿ ಪ್ರಧಾನ ಮಂತ್ರಿ ಮೂರು ಪಡೆಗಳ ಮುಖ್ಯಸ್ಥರು ಮತ್ತು ಪ್ರಮುಖ ಪ್ರಮುಖ ಮಂತ್ರಿಗಳು ಭಾಗವಹಿಸಲಿದ್ದಾರೆ. ಭಾರತವು ಪಾಕಿಸ್ತಾನ ಸರ್ಕಾರದ ಎಕ್ಸ್ ಖಾತೆಯನ್ನು ಸ್ಥಗಿತಗೊಳಿಸಿದೆ.
ಪಾಕಿಸ್ತಾನಿ ಪ್ರಜೆಗಳಿಗೆ ಸಾರ್ಕ್ ವೀಸಾ ವಿನಾಯಿತಿ ಯೋಜನೆಯನ್ನು ಬುಧವಾರ ಭಾರತ ಸ್ಥಗಿತಗೊಳಿಸಿತ್ತು. ಪಾಕಿಸ್ತಾನಿ ನಾಗರಿ ಕರಿಗೆ ನೀಡಲಾದ ಯಾವುದೇ ಅಸ್ತಿತ್ವದಲ್ಲಿರುವ ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. 48 ಗಂಟೆ ಗಳಲ್ಲಿ ಭಾರತ ತೊರೆಯುವಂತೆ ಪಾಕ್ ಪ್ರಜೆಗಳಿಗೆ ಸೂಚಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ