ಮಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರ ಕೊಡ ಮಾಡುವ 2023ರ ಸಾಲಿನ ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕಿ ಇಂದಿರಾ ಹೆಗ್ಗಡೆ ಅವರು ಆಯ್ಕೆಯಾಗಿದ್ದಾರೆ. ಎಸ್.ಆರ್. ಹೆಗ್ಡೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಇಂದಿರಾ ಹೆಗ್ಗಡೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಹಿರಿಯ ಸಂಶೋಧಕ ಎಂ.ಎಂ. ಕಲ್ಬುರ್ಗಿ ಹೆಸರಿನ ಪ್ರಶಸ್ತಿ ತಮಗೆ ಬಂದಿರುವುದು ತುಳುನಾಡಿನ ಸಂಸ್ಕೃತಿ ಅಧ್ಯಯನಕೆ ಸಂದ ಗೌರವ ವಾಗಿದೆ. ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಗಳ ಕುರಿತು ಸಂಶೋಧನೆಗೆ ಸಾಕಷ್ಟು ಅವಕಾಶ ಗಳಿದ್ದು ಯುವಜನತೆ ಆಸಕ್ತಿ ತೋರಿಸ ಬೇಕು ಎಂದರು.
ಎಸ್.ಆರ್. ಹೆಗ್ಡೆ ಚಾರಿಟಬಲ್ ಟ್ರಸ್ಟ್ ನ ಕಾರ್ಯದರ್ಶಿ ಕೃಷ್ಣಮೂರ್ತಿ ಚಿತ್ರಾಪುರ ಮಾತನಾಡಿ, ಇಂದಿರಾ ಹೆಗ್ಗಡೆ ಅವರನ್ನು ಅಭಿನಂದಿಸಿದರು. ಕೋಶಾಧಿಕಾರಿ ಜ್ಯೋತಿ ಚೇಲೈರು ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ