ಪುಂಜಾಲಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ಎನ್ ಎಸ್ ಎಸ್ ಘಟಕ 1 &2, ಭಾರತೀಯ ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ, ಹಳೆ ವಿದ್ಯಾರ್ಥಿ ಸಂಘ, ರೋಟರಿ ಕ್ಲಬ್ ಮಡಂತ್ಯಾರ್, ಭಾರತೀಯ ರೆಡ್ ಕ್ರಾಸ್, ರಕ್ತ ನಿಧಿ ಕೇಂದ್ರ, ಸರ್ಕಾರ ಲೇಡಿ ಗೋಶನ್ ಆಸ್ಪತ್ರೆ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಏ.5ರಂದು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಈ ಶಿಬಿರದಲ್ಲಿ 68 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಮಾಧವ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟಕರಾದ ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷ ನಿತ್ಯಾನಂದ ಬಿ, ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಮಡಂತ್ಯಾರ್ ಕಾರ್ಯದರ್ಶಿ ತುಳಸಿದಾಸ ಪೈ, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರದ ಜಿಲ್ಲಾ ಸಂಯೋಜಕ ಪ್ರವೀಣ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಾಮ ರಾವ್ ಯು.ಜಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಕುಮಾರ್ ಇವರು ಭಾಗವಹಿಸಿದ್ದರು.
ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಕುಮಾರಿ ರಕ್ಷಿತಾ ಸ್ವಾಗತಿಸಿ, ಅರ್ಷದ್ ವಂದಿಸಿ, ಸುನೈನಾ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ