ಗದಗ: ಜಿಲ್ಲೆಯ ಮುಂಡರಿಗಿ ಪ್ರತಿಷ್ಠಿತ ಶ್ರೀ ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿಯ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಇದೇ ಏ.20ರಂದು ಕೆ.ಆರ್.ಬೆಲ್ಲದ್ ಕಲಾ ಹಾಗೂ ವಾಣಿಜ್ಯ ಮಹಾ ವಿದ್ಯಾಲಯ ಮತ್ತು ಅರ್ಥಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗ ಮುಂಡರಗಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘ ಇವರ ಆಶ್ರಯದಲ್ಲಿ ಗುರುವಂದನೆ, ಹಿರಿಯ ವಿದ್ಯಾರ್ಥಿಗಳ ಸಮಾಗಮ ಹಾಗೂ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಜರುಗಲಿದೆ.
ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಜರುಗಲಿರುವ ಸಮಾರಂಭದಲ್ಲಿ ಮುಂಡರಗಿ ಸಂಸ್ಥಾನ ಮಠದ ಶ್ರೀ ಮ.ನಿ.ಪ್ರ.ಜಗದ್ಗುರು, ನಾಡೋಜ ಡಾ.ಅನ್ನದಾನೀಶ್ವರ ಮಹಾ ಶಿವಯೋಗಿಗಳು ದಿವ್ಯ ಸಾನಿಧ್ಯವಹಿಸಲಿದ್ದಾರೆ.
ಜಗದ್ಗುರು ಅನ್ನದಾನೀಶ್ವರ ಮಠದ ಉತ್ತರಾಧಿಕಾರಿಗಳಾದ ಶ್ರೀ ಮ.ನಿ.ಪ್ರ.ಡಾ.ಮಲ್ಲಿಕಾರ್ಜುನಸ್ವಾಮಿಗಳು ನೇತೃತ್ವ ವಹಿಸಲಿದ್ದಾರೆ. ಕ.ರಾ.ಬೆಲ್ಲದ ಕಾಲೇಜು ಮೇಲ್ವಿಚಾರಣಾ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೊ.ಆರ್.ಎಲ್.ಪೊಲೀಸ್ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿಯ ಆಡಳಿತಾಧಿಕಾರಿ ಡಾ.ಬಿ.ಜಿ.ಜವಳಿ ಉಪಸ್ಥಿತಿ ವಹಿಸಲಿದ್ದಾರೆ.
ಧಾರವಾಡ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಎಫ್.ದೊಡ್ಡಮನಿ, ಹುಬ್ಬಳ್ಳಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಯಮನೂರಪ್ಪ ಕೆ., ಹರಪನಹಳ್ಳಿಯ ಡಿವೈಎಸ್‌ಪಿ ವೆಂಕಟಪ್ಪ ನಾಯಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಕಾಲೇಜಿನ ಪ್ರಾಚಾರ್ಯರಾದ ಡಾ.ಡಿ.ಸಿ.ಮಠ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ