ಪುಂಜಾಲಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಬಿ.ಎ/ಬಿ.ಕಾಂ/ಬಿ.ಎ ಪದವಿ ತರಗತಿಗಳಿಗೆ ದಾಖಲಾತಿ ಪ್ರಾರಂಭವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಮಾಧವ ತಿಳಿಸಿದರು.
ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಸುಸಜ್ಜಿತ ಗ್ರಂಥಾಲಯ, ಕೊಠಡಿಗಳು, ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್ ರೂಮ್, ಕ್ರೀಡಾ ಚಟುವಟಿಕೆ, ಎನ್‌ಎಸ್ ಎಸ್, ಯುವರೆಡ್ ಕ್ರಾಸ್,ರೋವರ್ ರೆಂಜರ್ಸ್ ಸೇರಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ವಾತಾವರಣ ಕಲ್ಪಿಸಿದ್ದು, ಪಿಯು ಉತ್ತೀರ್ಣರಾದ ವಿದ್ಯಾರ್ಥಿಗಳು ದಾಖಲಾತಿ ಹೊಂದಬಹುದಾಗಿದೆ. ಕಾಲೇಜಿನಲ್ಲಿ ಐಸಿಟಿ ಬೋಧನಾ ವಿಧಾನ ಬಳಕೆ, ಎಲ್.ಎಂ.ಎಸ್ ಕಲಿಕಾ ನಿರ್ವಹಣೆ ವ್ಯವಸ್ಥೆಯಡಿಯಲ್ಲಿ ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳಿಗೆ ಬೋಧನಾ ವ್ಯವಸ್ಥೆ ಕಲ್ಪಿಸಲಾಗಿದೆ. ಪದವಿ ಕಾಲೇಜು ಮಂಗಳೂರು ವಿಶ್ವವಿದ್ಯಾಲಯದಡಿ ಕಾರ್ಯನಿರ್ವಹಿಸುತ್ತಿದ್ದು, ಬಿ.ಬಿ.ಎ, ಬಿ.ಕಾಂ, ಬಿಎ ಕೋರ್ಸ್‌ಗಳಿಗೆ ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ