ಧರ್ಮಸ್ಥಳ: ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ನಾಳೆ (ಏಪ್ರಿಲ್ 6) ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಧನಕೀರ್ತಿ ಆರಿಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಮುಂದಿನ ವಿಚಾರಣೆವರೆಗೂ ಪ್ರತಿಭಟನೆ ನಡೆಸದಂತೆ ನಿರ್ಬಂಧ ವಿಧಿಸಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, ಪ್ರತಿಭಟನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಚರ್ಚೆಯಾಗಿರುವುದನ್ನು ಪೀಠದ ಗಮನಕ್ಕೆ ತಂದರು. ಹಿಂದೆ ಧರ್ಮಸ್ಥಳ ದೇವಾಲಯ ಹಾಗೂ ಧರ್ಮಾಧಿಕಾರಿ ಪರ ನ್ಯಾಯಾ ಲಯ ಹೊರಡಿಸಿದ್ದ ಆದೇಶಗಳನ್ನು ಉಲ್ಲಂಘಿಸುವ ಸಾಧ್ಯತೆ ಇದೆ. ಬಲವಂತವಾಗಿ ದೇವಸ್ಥಾನ ಪ್ರವೇಶಿಸುವ ಯತ್ನಗಳ ಬಗ್ಗೆಯೂ ಚರ್ಚೆ ನಡೆದಿದೆ ಎಂದು ವಿವರಿಸಿದರು.
ಏಪ್ರಿಲ್ 6ರ ಭಾನುವಾರದಂದು ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಗೆ ನ್ಯಾಯಪೀಠ ಮಧ್ಯಂತರ ತಡೆ ನೀಡಿ, ಪ್ರತಿಭಟನೆ ಆಯೋಜಕರಿಗೆ ತುರ್ತು ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.
ಈಗಾಗಲೇ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿಯನ್ನು ನಿರಪರಾಧಿ ಎಂದು ನ್ಯಾಯಾಲಯ ಘೋಷಣೆ ಮಾಡಿದೆ. ಆ ವ್ಯಕ್ತಿ ಜೈಲಿನಿಂದಲೂ ಬಿಡುಗಡೆಯಾಗಿದ್ದಾರೆ. ಹೀಗಾಗಿ ನೈಜ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ಹಾಗೂ ಏಪ್ರಿಲ್ 6ರಂದು ಧರ್ಮಸ್ಥಳದಲ್ಲಿ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ತೀರ್ಮಾನಿಸಿದ್ದವು.
ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವುದಕ್ಕೂ ಪೊಲೀಸರು ಅನುಮತಿ ನೀಡಿರಲಿಲ್ಲ. ಪೊಲೀಸರ ಈ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯ ಪೀಠವು ಶಾಂತಿಯುತ ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಧರ್ಮಸ್ಥಳದಲ್ಲಿ ನಾಳೆ ನಡೆಸಲು ಉದ್ದೇಶಿಸಿದ್ದ ಬೃಹತ್ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ