ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಕನಿಷ್ಠ 18 ವರ್ಷ ಮೇಲ್ಪಟ್ಟ ಮತ್ತು ಗರಿಷ್ಠ ವಯಸ್ಸು ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ 33 ವರ್ಷ, ಮಾಜಿ ಸೈನಿಕರು ಪ್ರವೇಶ ಪಡೆಯಲು ಬಯಸಿದರೆ 33 ರಿಂದ 65 ವರ್ಷ ನಿಗದಿ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 28 ರಂದು ಬೆಳಗ್ಗೆ ಉಡುಪಿಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಅದೇ ದಿನ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ