ಚುಟುಕು ಕವನ ವಾಚನಕ್ಕೆ ಆಹ್ವಾನ

Chandrashekhara Kulamarva
0


ಕಾಸರಗೋಡು: ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಸಹಕಾರದಲ್ಲಿ, ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬೇಕಲ ರಾಮ ನಾಯಕ ಅವರ ಬದುಕು- ಬರಹದ ಕುರಿತ ಸ್ಮರಣಾಂಜಲಿ ಕಾರ್ಯಕ್ರಮವು ಏ.27ರಂದು ಅಪರಾಹ್ನ 2ರಿಂದ ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ನಡೆಯಲಿದೆ.


ಈ ಸಂದರ್ಭದಲ್ಲಿ ನಡೆಯುವ ವಸಂತ ಚುಟುಕು ಕವಿಗೋಷ್ಠಿ ಯಲ್ಲಿ ಕಾಸರಗೋಡು ಜಿಲ್ಲೆಯ ಆಸಕ್ತ ಕವಿಗಳಿಗೆ ಚುಟುಕುಗಳನ್ನು ವಾಚಿಸಲು ಅವಕಾಶವಿದೆ. ಚುಟುಕಕ್ಕೆ ವಿಷಯ ನಿರ್ಬಂಧ ಇಲ್ಲ. ಒಬ್ಬರು 4 ಸಾಲಿನ ಉತ್ತಮ ಎನಿಸುವ ಮೂರು ಚುಟುಕವನ್ನು ವಾಚಿಸಬಹುದು.  ಆಸಕ್ತರು ಏ. 20ರ ಮೊದಲು 9447490344 ಸಂಖ್ಯೆಗೆ ವಾಟ್ಸಪ್ ಮೂಲಕ ತಮ್ಮ ಭಾಗವಹಿಸುವಿಕೆಯನ್ನು ತಿಳಿಸಬೇಕೆಂದು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ವಿರಾಜ್ ಅಡೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top