ಸೇನೆ ಸೇರಬಯಸುವವರಿಗೆ ಆಯ್ಕೆ ಪೂರ್ವ ಸಿದ್ಧತಾ ತರಬೇತಿಗೆ ಆಹ್ವಾನ

Chandrashekhara Kulamarva
0


ಉಡುಪಿ:
ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3 (ಎ) ಹಾಗೂ (3ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೊದಲನೇ ತಂಡದ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820- 2574881 ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top