ಅಡ್ಯನಡ್ಕ: ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನಲ್ಲಿ 27 ವರ್ಷಗಳಿಂದ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಹಾಬಲೇಶ್ವರ ಭಟ್ ಗೋಳಿತ್ತಡ್ಕ ಅವರಿಗೆ ಏಪ್ರಿಲ್ 5ರಂದು ಬೀಳ್ಕೊಡುಗೆ ಸಮಾರಂಭ ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಜರುಗಿತು.
ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಗೋವಿಂದ ಪ್ರಕಾಶ್ ಸಾಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿವೃತ್ತರನ್ನು ಫಲ ಪುಷ್ಪ ನೀಡಿ, ಶಾಲು ಹೊದೆಸಿ ಅವರು ಗೌರವಿಸಿದರು. ಮಹಾಬಲೇಶ್ವರ ಭಟ್ ಗೋಳಿತ್ತಡ್ಕ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ, ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು, ಆಡಳಿತ ಮಂಡಳಿ ಸದಸ್ಯ ಕೆ. ಸದಾಶಿವ ಹೊಳ್ಳ, ಜನತಾ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಜಯಶ್ರೀ ಕೆ. ಆರ್., ಜನತಾ ಪ್ರೌಢಶಾಲೆಯ ಹಿರಿಯ ಶಿಕ್ಷಕ ಎಸ್. ರಾಜಗೋಪಾಲ ಜೋಶಿ ಮಾತನಾಡಿ ಶುಭ ಹಾರೈಸಿದರು.
ಆಡಳಿತ ಮಂಡಳಿ ಸದಸ್ಯ ಹರಿಕೃಷ್ಣ ವಿ. ಎಂ. ವಾಟೆ, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್, ಜನತಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹರಿಣಾಕ್ಷಿ ಎ., ಜನತಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ ಎಂ., ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಜನತಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿಯರು ಪ್ರಾರ್ಥನೆ ಹಾಡಿದರು. ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ವಂದಿಸಿದರು. ಕನ್ನಡ ಉಪನ್ಯಾಸಕ ಕೆ. ಶೀನಪ್ಪ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ