ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿ ಅಧ್ಯಕ್ಷರಾಗಿ ಜಿನ್ನಪ್ಪ ಪೂಜಾರಿ ಆಯ್ಕೆ

Upayuktha
0



ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನದನ್ವಯ ಪುತ್ತೂರಿನಾದ್ಯಂತ ಧರ್ಮಶಿಕ್ಷಣ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಗ್ರಾಮಸಮಿತಿಗಳು ರೂಪುದಳೆಯುತ್ತಿದ್ದು, ಇದಕ್ಕೆ ಪೂರಕವಾಗಿ ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿಯನ್ನು ರಚಿಸಲಾಯಿತು. 

ಬೆಳ್ಳಿಪ್ಪಾಡಿಯ ಸುಬ್ರಹ್ಮಣ್ಯ ಭಜನಾ ಮಂಡಳಿ  ಕೇಂದ್ರಿತವಾಗಿ ಸಮಿತಿ ರಚಿಸಲಾಗಿದೆ. ಸ್ಥಳೀಯರಾದ ಜಿನ್ನಪ್ಪ ಪೂಜಾರಿ ಅಧ್ಯಕ್ಷರಾಗಿ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ್ ಗೌಡ ಡಿ.ವಿ., ಉಪಾಧ್ಯಕ್ಷರಾಗಿ ಲಕ್ಷ್ಮಣ ಗೌಡ, ಕಾರ್ಯದರ್ಶಿಯಾಗಿ ರಾಮಣ್ಣ ಗೌಡ, ಜತೆ ಕಾರ್ಯದರ್ಶಿಯಾಗಿ ಮೋಹನ್ ಪಕಳ, ಸಂಚಾಲಕರಾಗಿ ವಸಂತ ಕೈಲಾಜೆ, ಖಜಾಂಚಿಯಾಗಿ ಚಂದನ್ ತೆಂಕಪಾಡಿ, ಉಪಾಧ್ಯಕ್ಷರಾಗಿ ಮಲ್ಲಿಕಾ ಅಳ್ವ ಹಾಗೂ ಸಂಧ್ಯಾ ರಾಮಚಂದ್ರ, ಜತೆಕಾರ್ಯದರ್ಶಿ ಯಾಗಿ ಕುಸುಮಾಧರ, ಸಂಘಟನ ಕಾರ್ಯದರ್ಶಿಯಾಗಿ ಗಣೇಶ್ ಬಾರ್ತಿಹೊಲು ಆಯ್ಕೆಯಾದರು.


ಪುತ್ತೂರು ಅಂಬಿಕಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಬೋರ್ಕರ್, ಮಾಧವ ಸ್ವಾಮಿ ಮತ್ತು ದಿನೇಶ್ ಕುಮಾರ್ ಜೈನ್ ಹಾಗೂ ಬೆಳ್ಳಿಪ್ಪಾಡಿ ಭಾಗದ ಧರ್ಮ ಭಕ್ತರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top