ಕಲಾಕುಂಚದಿಂದ ಅಣಬೇರು ರಾಜಣ್ಣನವರಿಗೆ 80ರ ಸನ್ಮಾನ

Upayuktha
0



ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ದಾವಣಗೆರೆಯ ಖ್ಯಾತ ಹೋಟೆಲ್ ಉದ್ಯಮಿ, ಸಮಾಜ ಸೇವಕರಾದ ಅಣಬೇರು ರಾಜಣ್ಣನವರಿಗೆ ಇತ್ತೀಚಿಗೆ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಅವರ 80ನೇ ವರ್ಷದ ಜನಮದಿನದ ಸಂಭ್ರಮಕ್ಕೆ ಸನ್ಮಾನಿಸಿ ಗೌರವಿಸಲಾಯಿತು ಎಂದು ಕಲಾಕುಂಚದ ಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈತಿಳಿಸಿದ್ದಾರೆ.

ರಾಜಣ್ಣನವರು ಕಳೆದ 6 ದಶಮಾನದಿಂದ ನಿರಂತರವಾಗಿ ಸಾಮಾಜಿಕ ಕಾಳಜಿಯೊಂದಿಗೆ ಹೋಟೆಲ್ ಉದ್ಯಮದೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ನಿಸ್ವಾರ್ಥವಾಗಿ ಯಾವುದೇ ಪ್ರಚಾರವಿಲ್ಲದೇ ಕರ್ತವ್ಯ ನಿಷ್ಠೆಯಿಂದ ಕಾಯಕ ಮಾಡುತ್ತಿದ್ದು ಅವರನ್ನು ಕಲಾಕುಂಚ  ಅಭಿಮಾನದಿಂದ ಸನ್ಮಾನಿಸಿತು.


ಕಲಾಕುಂಚ ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್, ಕಲಾಕುಂಚ ಡಿ.ಸಿ.ಎ. ಟೌನ್‌ ಶಿಪ್ ಶಾಖೆಯ ಅಧ್ಯಕ್ಷರಾದ ಶಾರದಮ್ಮ , ಶಿವನಪ್ಪ ದಂಪತಿ, ಕಲಾಕುಂಚ ಎಂ.ಸಿ.ಸಿ. ಬ್ಲಾಕ್ ಶಾಖೆಯ ಅಧ್ಯಕ್ಷರಾದ  ಪ್ರಭಾ ರವೀಂದ್ರ,  ಕಲಾಕುಂಚ ಕೆ.ಬಿ. ಬಡಾವಣೆ ಶಾಖೆಯ ಅಧ್ಯಕ್ಷರಾದ ವಿ.ಕೃಷ್ಣಮೂರ್ತಿ ಮುಂತಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top