ಮಂಗಳೂರು: ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಅವರು ಶನಿವಾರ ಮೂಳೂರು ಅಡ್ಡೂರು ಜೋಡುಕೆರೆ ಕಂಬಳ ಕಾಯ೯ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಂಬಳವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರ ನೀಡಲಾಗುವುದು. ಬೆಂಗಳೂರಿನಲ್ಲಿಯೂ ಕಂಬಳ ನಡೆದಿದೆ. ಕಂಬಳ ಕ್ರೀಡೆಗೆ ಶಾಶ್ವತ ಪ್ರೋತ್ಸಾಹ ನೀಡಲು ಸರಕಾರ ನಿಧ೯ರಿಸಿದೆ ಎಂದು ಅವರು ಹೇಳಿದರು.
ಕಂಬಳದ ಕೋಣಗಳನ್ನು ಸಾಕಿ, ಅದರೊಂದಿಗೆ ತೋರಿಸುವ ಪ್ರೀತಿ ಅನನ್ಯವಾದದ್ದು. ಜನಪದ ಸಂಸ್ಕೃತಿ ಉಳಿಸಲು ಸರಕಾರ ಸದಾ ನೆರವು ನೀಡಲಿದೆ ಎಂದು ಅವರು ಹೇಳಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಶ್ರೀಮಂತವಾಗಿದೆ. ಧಾರ್ಮಿಕವಾಗಿ ಹಲವಾರು ಪುಣ್ಯಕ್ಷೇತ್ರಗಳಿವೆ. ಅತಿ ಹೆಚ್ಚು ಮೆಡಿಕಲ್ ಇಂಜಿನಿಯರಿಂಗ್ ಕಾಲೇಜುಗಳು ಇವೆ. ಇದಕ್ಕೆ ಪೂರಕವಾಗಿ ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಶೀಘ್ರವೇ ಪ್ರವಾಸೋದ್ಯಮ ಸಚಿವರೊಂದಿಗೆ ಇಲ್ಲಿಗೆ ಬಂದು ಹೊಸ ಕಾಯ೯ಕ್ರಮ, ನೀತಿ ರೂಪಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ ಮತ್ತಿತರರು ಇದ್ದರು. ಮೂಳೂರು ಅಡ್ಡೂರು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಆಲಿ ಸ್ವಾಗತಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ