ಏ.27: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 'ಕುಂಕುಮ ಮಹತಿ' ಕೃತಿ ಲೋಕಾರ್ಪಣೆ, ಸಾಮೂಹಿಕ ಕುಂಕುಮಾರ್ಚನೆ

Upayuktha
0


ಪುತ್ತೂರು: ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆ ಸಿಂಧೂರ, ಈ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಶ್ರೀಮತಿ ಕೃಷ್ಣವೇಣಿ ಮುಳಿಯ ಇವರ ಮುತುವರ್ಜಿಯಲ್ಲಿ, ಕಾಸರಗೋಡಿನ  ಲೇಖಕಿ ಶ್ರೀಮತಿ ಶೀಲಾ ಲಕ್ಷ್ಮೀ ಇವರು ಬರೆದ ಕೃತಿ 'ಕುಂಕುಮ ಮಹತಿ'ಯು ಏಪ್ರಿಲ್ 27 ಭಾನುವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯಲ್ಲಿರುವ ಅನ್ನ ಛತ್ರದಲ್ಲಿ ಬೆಳಗ್ಗೆ 9:30 ಕ್ಕೆ ಲೋಕಾರ್ಪಣೆಗೊಳ್ಳಲಿದೆ. ಬಳಿಕ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.


ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ, ಮುಳಿಯ ಪ್ರತಿಷ್ಠಾನ ಪುತ್ತೂರು ಸಹಯೋಗದಲ್ಲಿ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಕಾರದಲ್ಲಿ ನಡೆಯುವ ಕೃತಿ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ದೇವಾಲಯ ಸಂವರ್ಧನ ಸಮಿತಿಯ ವಿಭಾಗ ಪ್ರಮುಖ್ ಕೇಶವ ಪ್ರಸಾದ್ ಮುಳಿಯ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.


ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್, ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ ಪ್ರಮುಖ್  ಗಣೇಶ ಮಂಗಳೂರು ಇವರು ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.


ಈ ಕಾರ್ಯಕ್ರಮದಲ್ಲಿ ಸಾವಯವ ಕುಂಕುಮದ ಅರಿವನ್ನುಂಟು ಮಾಡುವ ನೆಟ್ಟಿನಲ್ಲಿ, ಸಾವಯವ ಕುಂಕುಮ ಅನಾವರಣಗೊಳ್ಳಲಿದೆ.


ವಿ. ಸೂ: ಕೃತಿ ಲೋಕಾರ್ಪಣೆಯ ಬಳಿಕ ಭಗವತ್ ಭಕ್ತ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ಆಸಕ್ತ ಕುಮಾರಿಯರು, ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಗೂ ಕೃತಿ ಲೋಕಾರ್ಪಣಾ ಸಮಾರಂಭಕ್ಕೆ ಭಾಗಿಯಾಗಿ ದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ವಿನಂತಿ. ಕುಂಕುಮಾರ್ಚನೆಗೆ ಬೇಕಾದ ಸಾಹಿತ್ಯವನ್ನು ಸಂಘಟಕರೇ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top