ಜೈನ, ಬೌದ್ಧ, ಸಿಖ್‌, ಪಾರ್ಸಿ ಸೇರಿದಂತೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಾಲ ಯೋಜನೆ

Upayuktha
0
ಮಂಗಳೂರು:  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ಖ ಜನಾಂಗದ 2025-26ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿ.ಇ.ಟಿ/ನೀಟ್ (M.B.B.S/B.D.S/Ayush/Bachelor of Architecture/ B.E/ B.Tech, Pharmacy, Agriculture science, Veternary and Farm Science Courses) ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸಿದರೆ  ಅರ್ಜಿ ಆಹ್ವಾನಿಸಲಾಗಿದೆ. 


ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನ. ನಿಗಮದ ವೆಬ್‍ಸೈಟ್  http:kmdconline.karnataka.gov.in  ಆನ್‍ಲೈನ್ ಮೂಲಕ  ಅರ್ಜಿ ಸಲ್ಲಿಸಬಹುದು.


ಕೆ.ಎಂ.ಡಿ.ಸಿ ವೆಬ್‍ಸೈಟ್‍ನಲ್ಲಿ ವಿದ್ಯಾರ್ಥಿಗಳು ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಇಂಡೆಮ್ನಿಟಿ ಬಾಂಡ್ ಹಾಗೂ ಇತರೆ ದಾಖಲಾತಿಗಳನ್ನು ಆನ್‍ಲೈನ್ ಸಲ್ಲಿಸದ ಕೂಡಲೇ  ಮಂಗಳೂರು ಪಾಂಡೇಶ್ವರ  “ಮೌಲಾನಾ ಅಜಾದ್ ಭವನ”  2ನೇ ಮಹಡಿಯಲ್ಲಿರುವ  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು.


ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ  ರೂ.8 ಲಕ್ಷ ಮಿತಿಯಲ್ಲಿರಬೇಕು), ಆಧಾರ್ ಕಾರ್ಡ್ ಮತ್ತು ರೇಶನ್ ಕಾರ್ಡ್ ಜೆರಾಕ್ಸ್ ಪ್ರತಿ,  ಸಿ.ಇ.ಟಿ/ನೀಟ್ ಪರೀಕ್ಷೆ ಪ್ರವೇಶ ಪತ್ರ, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಅಂಕ ಪಟ್ಟಿಯ ದೃಢೀಕೃತ ಪ್ರತಿ, ಇಂಡಿಮ್ನಿಟಿ ಬಾಂಡ್, ವಿದ್ಯಾರ್ಥಿ ಮತ್ತು ಪೋಷಕರ ತಲಾ 2  ಫೋಟೋ ಸಲ್ಲಿಸಬೇಕು ಎಂದು ನಿಗಮದ   ಪ್ರಕಟಣೆ ತಿಳಿಸಿದೆ.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top