ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜೈನ ಸೊಸೈಟಿಯಿಂದ ಏ.10 ರಂದು ಬೆಳಿಗ್ಗೆ 11.30 ಕ್ಕೆ ನಗರದ ಬಜಿಲಕೇರಿ ಶ್ರೀ ಆದೀಶ್ವರ ಸ್ವಾಮಿ ಬಸದಿಯಲ್ಲಿ ಭಗವಾನ್ ಮಹಾವೀರ ಜಯಂತಿಯನ್ನು ಆಚರಿಸಲಾಗುವುದು.
ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿರುವರು. ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಇವರು ಭಗವಾನ್ ಶ್ರೀ ಮಹಾವೀರ ಜಯಂತಿ ಸಂದೇಶ ನೀಡಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ