ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡು ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ನಾಳೆ ಈ ಕುರಿತು ಸಭೆ ನಡೆಸುತ್ತೇವೆ. ದರ ಏರಿಕೆ ಖಂಡಿಸಿ ಮುಂದಿನ ವಾರ ಮುಷ್ಕರಕ್ಕೆ ಕರೆ ನೀಡಲಿದ್ದೇವೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿಆರ್ ಷಣ್ಮುಗಪ್ಪ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡ 2.73 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಪರಿಣಾಮವಾಗಿ ಕರ್ನಾಟಕದಲ್ಲಿ ಡೀಸೆಲ್ ಬೆಲೆ 2 ರೂಪಾಯಿಯಷ್ಟು ಹೆಚ್ಚಳವಾಗಿದೆ. ದರ ಹೆಚ್ಚಳದ ನಂತರ ಬೆಂಗಳೂರಿನಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 91.02 ರೂಪಾಯಿ ಆಗಿದೆ. ತನ್ನ ನಿರ್ಧಾರವನ್ನು ಸರ್ಕಾರ ಸಮರ್ಥಿಸಿಕೊಂಡಿದೆ.
ಈಗಾಗಲೇ ರಾಜ್ಯದಲ್ಲಿ ಬಹುತೇಕ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಡೀಸೆಲ್ ಬೆಲೆ ಹೆಚ್ಚಳದಿಂದ ಮತ್ತಷ್ಟು ಸಮಸ್ಯೆಯಾಗಲಿದೆ. ಅಗತ್ಯ ವಸ್ತುಗಳ ಸಾಗಾಟ ದರ ಹೆಚ್ಚಳವಾದಲ್ಲಿ ಮತ್ತೆ ಬೆಲೆ ಏರಿಕೆಯ ಬಿಸಿ ಜನ ಸಾಮಾನ್ಯರಿಗೆತಟ್ಟಲಿದೆ. ಲಾರಿ ಮುಷ್ಕರ ನಡೆದರೆ ಅಗತ್ಯ ವಸ್ತುಗಳ ಪೂರೈಕೆ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಸಂಘ ಎಚ್ಚರಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ