ಮಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭಯೋತ್ಪಾದಕ ದಾಳಿ ಖಂಡನೀಯ. ಹೇಡಿ ಭಯೋತ್ಪಾದಕರು ನಿಮ್ಮ ಧರ್ಮ ಯಾವುದು ಎಂದು ಕೇಳಿ ನಂತರವೇ ಈ ದಾಳಿ ನಡೆಸಿದ್ದು ಅವರ ನೀಚ ಮಾನಸಿಕತೆಗೆ ಹಿಡಿದ ಕೈಗನ್ನಡಿ. ಕೂಡಲೇ ಕಣಿವೆ ರಾಜ್ಯದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ರಾಜ್ಯ ಸರ್ಕಾರ ಎಲ್ಲ ವ್ಯವಸ್ಥೆಯನ್ನು ಮಾಡಬೇಕು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಇಂತಹ ಹೇಯ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದಿದ್ದು ಭಯೋತ್ಪಾದನೆಯ ವಿರುದ್ಧ ನಮ್ಮ ಹೋರಾಟ, ಸಂಕಲ್ಪ ಅಚಲವಾಗಿದೆ. ಈ ದಾಳಿಯಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ತೀವ್ರ ಸಂತಾಪಗಳನ್ನು ಸೂಚಿಸುತ್ತಾ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ