ಸಿ.ಇ.ಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

Upayuktha
0



ಮಂಗಳೂರು: ಏಪ್ರಿಲ್ 15 ರಂದು ಸಿ.ಇ.ಟಿ (CET) 2025 ರ ಕನ್ನಡ ಭಾಷೆ ಪರೀಕ್ಷೆ ಹಾಗೂ ಏಪ್ರಿಲ್ 16 ಮತ್ತು 17 ರಂದು ಸಿಇಟಿ ವೃತ್ತಿಪರ ಕೋರ್ಸ್ ಪರೀಕ್ಷೆಗಳು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 35 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತಾವರಣದಲ್ಲಿ ನಡೆಸಲು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೋಲಿಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ.


ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.


ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಕಾರಕ (ಅಸಿಡ್) ಸ್ಫೋಟಕ ವಸ್ತುಗಳನ್ನು ಕೊಂಡುಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.


ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.


ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಐದು ಅಥವಾ ಐದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದನ್ನು ನಿಷೇಧಿಸಲಾಗಿದೆ.


ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಮತ್ತು ಕಂಪ್ಯೂಟರ್/ ಸೈಬರ್ ಅಂಗಡಿಗಳು/ ಪ್ರಿಂಟಿಂಗ್ ಶಾಪ್‍ಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ. 


ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ದೂರವಾಣಿ, ಬ್ಲೂಟೂತ್ ಹಾಗೂ ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.


ಈ ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ, ಬ್ಯಾಂಕ್ ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆ ವೇಳೆಲಾಠಿ /ಶಸ್ತ್ರಾಸ್ತ್ರ ಉಪಯೋಗಿಸುವುದಕ್ಕೆ ಅನ್ವಯವಾಗುವುದಿಲ್ಲ ಎಂದು ಉಪ ಪೋಲಿಸ್ ಆಯುಕ್ತ ಹಾಗೂ ವಿಶೇಷ ಕಾರ್ಯ ನಿರ್ವಾಹಕ ದಂಡಾಧಿಕಾರಿ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top