ಮಂಗಳೂರು: ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಬಲ್ಮಠ ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ 4. ಮತ್ತು 20 ರ ವಾರ್ಷಿಕ ವಿಶೇಷ ಸೇವಾ ಶಿಬಿರ ವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರಾಥಮಿಕ ಶಾಲೆ ಫೀಶರೀಶ್ ಚಿತ್ರಾಪುರ ಕುಳಾಯಿ ಯಲ್ಲಿ ಉದ್ಘಾಟನೆ ಗೊಂಡಿತು.
ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಚಿತ್ರಾಪುರ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಸಾಮಾಜಿಕ ಸೇವೆಗಳ ಅರಿವಿನೊಂದಿ ಗೆ ವಿದ್ಯಾರ್ಥಿ ಗಳವ್ಯಕ್ತಿತ್ವ ವಿಕಸನವೂ ಸಾಧ್ಯವಾಗುತ್ತದೆ ಎಂದರು.
ಕೂಳೂರು ಮೊಗವೀರ ಸಂಘದ ಉಪಾಧ್ಯಕ್ಷ ತೇಜಪಾಲ್ ಮಾತನಾಡಿ ಸರಕಾರಿ ಪ್ರಾಥಮಿಕ ಶಾಲೆ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಿಕ್ಷಣ ಸಂಸ್ಥೆ ಗಳು ಸಹಕಾರ ನೀಡುವು ದರಿಂದ ಶಾಲೆಗಳ ಸುಧಾರಣೆ ಸಾಧ್ಯ ವಾಗುತ್ತದೆ ಎಂದರು.
ಪಣಂಬೂರು ಮೊಗವೀರ ಸಂಘದ ಅಧ್ಯಕ್ಷ ಮಾಧವ ಸುವರ್ಣ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಶೋಭಾ ವಿದ್ಯಾರ್ಥಿಗಳ ಬೆಳವಣಿಗೆ ಗೆ ಶಿಬಿರ ಗಳು ಪೂರಕ ಎಂದರು. ಶಾಲಾ ಹಿರಿಯ ಶಿಕ್ಷಕಿ ಸುಕೇಶಿಣಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯೆ ಶಶಿಕಲಾ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಅರುಣ್ ದಾಸ್ ಮತ್ತು ವಿಜಯಲಕ್ಷ್ಮಿ ಉಪಸ್ಥಿತ ರಿ ದ್ದರು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಕಾರ್ಯದರ್ಶಿಗಳಾದ ನಿತೀಶ್ ಮತ್ತು ನಂದನ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ