ಕಲರ್ಸ್ ಕನ್ನಡದಲ್ಲಿ ಹೊಸ ಕೌಟುಂಬಿಕ ಧಾರಾವಾಹಿ 'ಮುದ್ದು ಸೊಸೆ'

Chandrashekhara Kulamarva
0

ಮಂಗಳೂರು:  'ಮುದ್ದು ಸೊಸೆ' ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ  ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ. 


ಇದೀಗ, ಮತ್ತೊಂದು ಹೃದಯಸ್ಪರ್ಶಿ ಕತೆ 'ಮುದ್ದು ಸೊಸೆ'ಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ತ್ರಿವಿಕ್ರಮ್ ನಾಯಕರಾಗಿ ಪ್ರತಿಮಾ ಠಾಕುರ್ ನಾಯಕಿಯಾಗಿರುವ, ಮುನಿ ಮತ್ತು ಹರಿಣಿ ಶ್ರೀಕಾಂತ್ ತಾರಾಗಣದ ಈ ಬಹುನಿರೀಕ್ಷಿತ ಧಾರಾವಾಹಿ ಏಪ್ರಿಲ್ 14ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 7:30ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ. 


ವೈದ್ಯೆ ಆಗಬೇಕೆಂಬ ಕನಸನ್ನು ಕಾಣುತ್ತಿರುವ ಪ್ರತಿಭಾವಂತ ವಿದಾರ್ಥಿನಿ ವಿದ್ಯಾ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ  ಕತೆಯನ್ನು ಹೇಳುತ್ತದೆ 'ಮುದ್ದು ಸೊಸೆ'.  ಮನಸ್ತುಂಬಾ ಓದು ತುಂಬಿರುವ, ಮನಸೊಪ್ಪದ ಮದುವೆಯಾಗಿರುವ 'ಮುದ್ದು ಸೊಸೆ' ಮನೆಮಂದಿಯೆಲ್ಲ ಸೇರಿ ನೋಡಲೇಬೇಕಾದ ಧಾರಾವಾಹಿ. 


ಪ್ರೀತಿ, ಸಂಬಂಧಗಳ, ಆತ್ಮವಿಶ್ವಾಸ -ಪ್ರಬಲ ಸಂಕಲ್ಪ ಹೊಂದಿರುವ ನಾಯಕಿಯ ಸುತ್ತ ಹೆಣೆದಿರುವ ಕಥಾ ಹಂದರದಿಂದ ' 'ಮುದ್ದು ಸೊಸೆ' ಪ್ರೇಕ್ಷಕರ ಹೃದಯ ಗೆಲ್ಲಲಿದೆ. 'ಎಸ್ಟ್ರೆಲ್ಲಾ ಕಥೆಗಳನ್ನು ' ನಿರ್ಮಿಸುತ್ತಿರುವ ‘ಮುದ್ದು ಸೊಸೆ’ ಧಾರಾವಾಹಿಯು ಬೊಗಸೆಗಣ್ಣಿನ ಬಯಕೆಯ ವಿದ್ಯಾಳ ಕತೆಯನ್ನು ಹೇಳುತ್ತದೆ ಎಂದು ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top