ಮಂಗಳೂರು: ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‌ರವರ 134ನೇ ಜನ್ಮ ದಿನ ಮತ್ತು ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಇವರ 118ನೇ ಜನ್ಮ ದಿನವನ್ನು ಜಂಟಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ಸಂಕೀರ್ಣದ 'ಡಾ.ಯು.ಆರ್.ರಾವ್ ಸಭಾಂಗಣ' ದಲ್ಲಿ ಏಪ್ರಿಲ್ 14 (ಸೋಮವಾರ) ಆಚರಿಸಲು ನಿರ್ಧರಿಸಲಾಗಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ. ಶಿವಾನಂದ ಕೆಳಗಿನಮನಿ, ಹಿರಿಯ ಪ್ರಾಧ್ಯಾಪಕರು, ಕನ್ನಡ ಭಾರತಿ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ, ಶಿವಮೊಗ್ಗ, ಇವರು ಆಗಮಿಸಿ ಪ್ರಧಾನ ಭಾಷಣ ಮಾಡಲಿದ್ದಾರೆ, ಎಂದು ಮಂಗಳೂರು ವಿವಿ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ