ಲಷ್ಕರ್ ಸಂಘಟನೆಯ ಟಾಪ್ ಕಮಾಂಡರ್ ಸೈಫುಲ್ಲಾ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಇಬ್ಬರು ಈ ಕೃತ್ಯದ ಹಿಂದೆ ಇರುವುದಾಗಿ ಮೂಲಗಳು ತಿಳಿಸಿವೆ. ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ ಸೂತ್ರಧಾರ ಹಫೀಜ್ ಸಯೀದ್ ಗೆ ಆಪ್ತ ಎಂದು ತಿಳಿದು ಬಂದಿದೆ. ಐಷಾರಾಮಿ ಕಾರುಗಳಲ್ಲಿ ಪ್ರಯಾಣಿಸುವ ಈತನಿಗೆ ಯಾವಾಗಲೂ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದಿರುವ ಲಷ್ಕರ್ ಉಗ್ರರು ಭದ್ರತೆ ನೀಡುತ್ತಾರೆ, ಪಾಕ್ ಸೇನಾ ಅಧಿಕಾರಿಗಳ ಜೊತೆಗೂ ಈತ ಉತ್ತಮ ಸಂಬಂಧ ಹೊಂದಿದ್ದಾನೆ. ಎರಡು ತಿಂಗಳ ಹಿಂದೆ ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಪಂಜಾಬ್‌ನ ಕಂಗನ್‌ಪುರಕ್ಕೆ ಭೇಟಿ ನೀಡಿದ್ದ. ಕಂಗನ್‌ಪುರದಲ್ಲಿ ಪಾಕ್ ಸೇನೆಯ ದೊಡ್ಡ ಬೆಟಾಲಿಯನ್ ಇದೆ. ಪಾಕ್ ಸೇನೆಯ ಕರ್ನಲ್ ಜಾಹಿದ್ ಜರೀನ್ ಭಾರತದ ವಿರುದ್ಧ ಜಿಹಾದಿ ಭಾಷಣ ಮಾಡಲು ಈತನನ್ನು ಕರೆಸಿದ್ದ. ಭಾಷಣದಲ್ಲಿ ಪಾಕ್ ಸೇನೆಯನ್ನು ಭಾರತದ ವಿರುದ್ಧದ ಕೃತ್ಯಕ್ಕೆ ಪ್ರಚೋದಿಸಿದ್ದ.
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಶ್ಮೀರವನ್ನು ವಶಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಮುಂಬರುವ ದಿನಗಳಲ್ಲಿ ಮುಜಾಹಿದ್ದೀನ್ ದಾಳಿ ತೀವ್ರಗೊಳ್ಳಲಿದೆ. ಫೆಬ್ರವರಿ 2, 2026 ರೊಳಗೆ ಕಾಶ್ಮೀರ ಸ್ವತಂತ್ರವಾಗಲಿದೆ ಎಂದು ನಾವು ಭಾವಿಸುವುದಾಗಿ ಕಳೆದ ಫೆಬ್ರವರಿಯಲ್ಲಿ ಹೇಳಿದ್ದ. ಈ ಸಭೆಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಪಾಕಿಸ್ತಾನ ಸೇನೆ ಜಂಟಿಯಾಗಿ ಆಯೋಜಿಸಿದ್ದವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ