ಮತ್ಸ್ಯ ಸಂಪದ ಯೋಜನೆ: ಅರ್ಜಿ ಆಹ್ವಾನ

Upayuktha
0



ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲ್ಯಾಂಟ್‌/ ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ.


ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top