ಪುತ್ತೂರು: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನವೀಕೃತ ಮಳಿಗೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸ್ವಚ್ಚ ಪುತ್ತೂರು ಕಾರ್ಯಕ್ರಮದ ಅಂಗವಾಗಿ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಸಭಾಂಗಣದಲ್ಲಿ ಜರಗಲಿರುವುದು. ಈ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಹಾಗೂ ನಗರ ಸಭೆ ಸಿಬ್ಬಂದಿಗಳಿಗೆ ಅಧಿಕಾರಿಗಳು ಮತ್ತು ಸರ್ವ ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಜರಗಲಿದೆ.
ಸ್ವಚ್ಚ ಪುತ್ತೂರು ಯೋಜನೆಯಲ್ಲಿ ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಸಂಸ್ಥೆಯು ಪ್ರಮುಖ ಪಾತ್ರ ವಹಿಸಿರುವುದರಿಂದ, ಈ ಯೋಜನೆಯ ಭಾಗೀದಾರರು ಎಂಬ ನೆಲೆಯಲ್ಲಿ ನಗರಸಭೆಗೆ ಸಂಬಂಧಿಸಿದರವರನ್ನು ಗೌರವಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮುಳಿಯ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೇಶವ ಪ್ರಸಾದ್ ಮುಳಿಯ ಮತ್ತು ಕೃಷ್ಣ ನಾರಾಯಣ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿದಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ