ಬೆಂಗಳೂರು, ವೈಟ್‌ಫೀಲ್ಡ್: ಮೆಡಿಕವರ್ ಆಸ್ಪತ್ರೆ ತನ್ನ ಆರ್ಥೋಪೆಡಿಕ್ ವಿಭಾಗವನ್ನು ಮತ್ತಷ್ಟು ಬಲಪಡಿಸುವ ಸಲುವಾಗಿ, ಅತ್ಯಾಧುನಿಕ ಆರ್ಥೊ ರೊಬೋಟಿಕ್ ಶಸ್ತ್ರಚಿಕಿತ್ಸಾ ತಂತ್ರಜ್ಞಾನವನ್ನು ಯಶಸ್ವಿಯಾಗಿ ಆರಂಭಿಸಿದೆ. ಈ ತಂತ್ರಜ್ಞಾನದ ಮೂಲಕ ರೋಗಿಗಳಿಗೆ ಹೆಚ್ಚು ನಿಖರ ಹಾಗೂ ಅನುಕೂಲಕರ ಶಸ್ತ್ರಚಿಕಿತ್ಸೆಯನ್ನು ನೀಡುವುದು ಸಾಧ್ಯವಾಗಲಿದೆ.
ಈ ಹೊಸ ಉಪಕ್ರಮದಿಂದ ಮೂಳೆ ಮತ್ತು ಜೋಡಣೆ ಸಂಬಂಧಿತ ಜಟಿಲ ಸಮಸ್ಯೆಗಳಿಗೆ ಹೆಚ್ಚು ನಿಖರವಾದ ಮತ್ತು ಪರಿಣಾಮಕಾರಿ ಚಿಕಿತ್ಸೆ ದೊರೆಯಲಿದ್ದು, ವಿಶೇಷವಾಗಿ ಮಂಡಿ ಮತ್ತು ಹಿಪ್ ಜೋಡಣೆಯ ಬದಲಾವಣಾ ಶಸ್ತ್ರಚಿಕಿತ್ಸೆಗಳಲ್ಲಿ ರೊಬೋಟಿಕ್ ತಂತ್ರಜ್ಞಾನವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ.
ಈ ತಂತ್ರಜ್ಞಾನದ ಅನುಷ್ಠಾನದಲ್ಲಿ ಮೆಡಿಕವರ್ ಆಸ್ಪತ್ರೆಯ ಹಿರಿಯ ಮೂಳೆ ತಜ್ಞರು –
ಡಾ. ಆರ್. ಡಿ. ಚಕ್ರವರ್ತಿ, ಡಾ. ರವೀಂದ್ರ ಪುಟ್ಟಸ್ವಾಮಯ್ಯ, ಡಾ. ಸಂಜಯ್ ಹೆಗಡೆ, ಡಾ. ಕೃಷ್ಣಕುಮಾರ್ ಮತ್ತು ಡಾ. ರಾಘವೇಂದ್ರ ರವರು ಪ್ರಮುಖ ಪಾತ್ರವಹಿಸಿದ್ದಾರೆ. ಈ ತಜ್ಞರು ರೊಬೋಟಿಕ್ ತಂತ್ರಜ್ಞಾನದಲ್ಲಿ ಪರಿಣಿತರಾಗಿದ್ದು, ವಿಶ್ವಮಟ್ಟದ ಚಿಕಿತ್ಸೆ ನೀಡಲು ಸದಾ ಸಿದ್ಧರಾಗಿದ್ದಾರೆ.
ಈ ಶಸ್ತ್ರಚಿಕಿತ್ಸಾ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಗೋಪಾಲ್ ಹಾಗೂ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಶೃತಿ ಕೊಯ್ಲಿ ಅವರು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ