ಬಳ್ಳಾರಿ: ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ 27.04.2025 ರಂದು ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ರಾಷ್ಟ್ರೀಯ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿದ್ದು. ಸಾಯಂಕಾಲ ೪:೩೦ ನಿಮಿಷಕ್ಕೆ ಮೋತಿ ವೃತ್ತದಲ್ಲಿರುವ ಶ್ರೀ ಬಸವೇಶ್ವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಹೃದಯ ಸ್ಪರ್ಶಿ ಮೆರವಣಿಗೆಯು ಹಲವಾರು ಕಲಾ ಪ್ರಕಾರಗಳ ಕಲಾವಿದರ ಜೊತೆಗೆ ಪ್ರಾರಂಭಗೊಂಡು ಡಾ. ಜೋಳದ ರಾಶಿ ದೊಡ್ಡನಗೌಡ ರಂಗಮಂದಿರದವರಿಗೆ ಸಾಗಲಿದೆ. ನಂತರ ವೇದಿಕೆಯ ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಕಲಾವಿದರು, ಚಲನಚಿತ್ರ ನಟರು, ನಿರ್ದೇಶಕರು, ಸಾಹಿತಿಗಳು, ರಾಜಕೀಯ ಧುರೀಣರು, ರಂಗಭೂಮಿಯ ಕಲಾವಿದರು ಭಾಗವಹಿಸಲಿದ್ದಾರೆ.
ನಾಡೋಜ ಶ್ರೀ ಬೆಳಗಲ್ಲು ವೀರಣ್ಣನವರ ಅಭಿಮಾನಿಗಳು ಹಾಗೂ ಎಲ್ಲಾ ಪ್ರಕಾರದ ಕಲಾವಿದರ ಸಹಕಾರದೊಂದಿಗೆ ಈ ಕಾರ್ಯಕ್ರಮ ಜರುಗಲಿದೆ. ಹಾಗಾಗಿ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಕಾರ್ಯಕ್ರಮದ ಯಶಸ್ಸಿಗೆ ಕಾರಣಕರ್ತರಾಗಬೇಕಾಗಿ ವಿನಂತಿಸಿದ್ದಾರೆ.
ತಮ್ಮ ಅಪ್ರತಿಮ ಕಲಾಪ್ರತಿಭೆಯ ಮೂಲಕ ಬಳ್ಳಾರಿ ಜಿಲ್ಲೆಯ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದವರೆಗೆ ಹಬ್ಬಿಸಿದ ತೊಗಲು ಗೊಂಬೆ ಆಟದ ಬ್ರಹ್ಮ, ರಂಗಭೀಷ್ಮ, ಜಾನಪದ ಕಲಾ ಕ್ಷೇತ್ರದ ದ್ರುವ ತಾರೆ,ನಮ್ಮ ನಿಮ್ಮೆಲ್ಲರ ನೆಚ್ಚಿನ ಸರಳ ಸಜ್ಜನಿಕೆಯ ಹಿರಿಯ ಚೇತನ ನಾಡೋಜ ಶ್ರೀ ಬೆಳಗಲ್ಲು ವೀರಣ್ಣನವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದರ ಮೂಲಕ ಅವರಿಗೆ ನಮನ ಸಲ್ಲಿಸೋಣ ಎಂದು ಬೆಳಗಲ್ ವೀರಣ್ಣನವರ ಪುತ್ರರಾದ ಹನುಮಂತಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ