ಮಂಗಳೂರು: ಪ್ರಸಿದ್ಧ ಭರತನಾಟ್ಯ ಕಲಾವಿದೆ ವಿದುಷಿ ಅಯನಾ ಪೆರ್ಲ ಅವರು ನಗರದ ಇಂಟ್ಯಾಕ್ ಘಟಕದ (ಭಾರತೀಯ ಕಲೆ ಮತ್ತು ಸಂಸ್ಕೃತಿ ಕೇಂದ್ರ) ಆಶ್ರಯದಲ್ಲಿ ಕೊಡಿಯಾಲಗುತ್ತು ಪಾರಂಪರಿಕ ಕಲಾ ಕೇಂದ್ರದಲ್ಲಿ ನಾಟ್ಯ ಚಾರಿ ಎಂಬ ನೃತ್ಯ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯೊಂದನ್ನು ಏಪ್ರಿಲ್ 4ರ ಶುಕ್ರವಾರದಂದು ಸಂಜೆ 5 ಗಂಟೆಯಿಂದ ಪ್ರಸ್ತುತ ಪಡಿಸಲಿದ್ದಾರೆ.
ಭರತನಾಟ್ಯದ ಆಂಗಿಕದ ಭಾಗವಾದ ಅರ್ಥಪೂರ್ಣ ದೇಹಚಲನೆಗಳ ಕುರಿತು ಹಾಗೂ ನೃತ್ಯದಲ್ಲಿ ಅವುಗಳ ಸಂಯೋಜನೆ ಕುರಿತು ಈ ಪ್ರಾತ್ಯಕ್ಷಿಕೆಯಲ್ಲಿ ವಿವರಿಸಲಾಗುತ್ತದೆ.
ವಸ್ತ್ರೋದ್ಯಮಿ ಎಂ. ಮುರಳೀಧರ ಶೆಟ್ಟಿ ಜ್ಯೋತಿ ಪ್ರಜ್ವಲನಗೊಳಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದು ಧರ್ಮದರ್ಶಿ ಹರಿಕೃಷ್ಣ ಪುನರೂರು ಮತ್ತು ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ನೃತ್ಯಾಸಕ್ತರಿಗೆ ಕಾರ್ಯಕ್ರಮಕ್ಕೆ ಮುಕ್ತ ಪ್ರವೇಶವಿದೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ