ಏ.20ರಂದು ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Chandrashekhara Kulamarva
0


ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣಮಂಟಪಗಳ ಸಮುಚ್ಚಯವನ್ನು ನಿರ್ಮಿಸಿದ್ದು, ಇದೇ 20ರಂದು ಭಾನುವಾರ ಅಪರಾಹ್ನ ನಾಲ್ಕು ಗಂಟೆಗೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಸುರೇಂದ್ರ ಕುಮಾರ್ ಶುಭಾಶಂಸನೆ ಮಾಡುವರು.


ಶಾಸಕರುಗಳಾದ ಕೆ. ಹರೀಶ್ ಪೂಂಜ, ಮತ್ತು ಕೆ. ಪ್ರತಾಪಸಿಂಹ ನಾಯಕ್, ಹಾಗೂ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಅಮೃತವರ್ಷಿಣಿ ಸಭಾಭವನದಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top