ಬಂಟ್ವಾಳ: 2024-25 ರ ಶೈಕ್ಷಣಿಕ ಸಾಲಿನಲ್ಲಿ 93% ದೊಂದಿಗೆ ತುಂಬೆ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಬಂದಿರುತ್ತದೆ.
ವಿಜ್ಞಾನ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 66 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಮೊಹಮ್ಮದ್ ಸಿನಾನ್ 568 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದರೆ, ವಾಣಿಜ್ಯ ವಿಭಾಗದಲ್ಲಿ 68 ಮಂದಿ ಹಾಜರಾಗಿ 63 ವಿದ್ಯಾರ್ಥಿಗಳು ತೇರ್ಗಡೆಯಾಗಿ ವಿದ್ಯಾರ್ಥಿನಿ ಕು. ನಮ್ರತಾ 547 ಅಂಕಗಳೊಂದಿಗೆ ಪ್ರಥಮ ಹಾಗೂ ಕಲಾ ವಿಭಾಗದಲ್ಲಿ 15 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕು. ಮೆಹರುನ್ನೀಸಾ 493 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.
ಕಾಲೇಜಿನ ಒಟ್ಟು ಉತ್ತಮ ಫಲಿತಾಂಶಕ್ಕಾಗಿ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್‌ನ ಆಡಳಿತ ಮಂಡಳಿ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದಿಸಿರುತ್ತದೆ ಎಂಬುದಾಗಿ ಪ್ರಾಂಶುಪಾಲರಾದ ವಿ.ಎಸ್. ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ