ಕುಡುಪು ಪ್ರಕರಣ- ರಾಜಕೀಯ ಪ್ರೇರಿತ, ಸುಳ್ಳು ಕೇಸಿನಲ್ಲಿ ಸಿಲುಕಿಸಲು ಯತ್ನ: ಡಾ. ಭರತ್ ಶೆಟ್ಟಿ ವೈ ಕಿಡಿ

Upayuktha
0


ಮಂಗಳೂರು: ಕುಡುಪು ಬಳಿ ದೇಶ ವಿರೋಧಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಹಿಂದೂ ಯುವಕರನ್ನು ಈ ಕೇಸಿನಲ್ಲಿ ಸಿಲುಕಿಸಲು ಪ್ರಯತ್ನಿಸಲಾಗುತ್ತಿದೆ.ಮಾತ್ರವಲ್ಲ ರಾಜಕೀಯ ಒತ್ತಡವೂ ಪೋಲೀಸರ ಮೇಲೆ ಹಾಕಲಾಗುತ್ತಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.


ತನಿಖೆಯ ನೆಪದಲ್ಲಿ ಎಳೆದುಕೊಂಡು ಹೋಗಿ ಪ್ರಕರಣವನ್ನು ಬಲವಂತವಾಗಿ ಒಪ್ಪಿಕೊಳ್ಳುವಂತೆ ಬೆದರಿಸಲಾಗುತ್ತಿದೆ. ಇದೀಗ ಕೆಲವು ಸಂಘಟನೆಗಳು, ಪಕ್ಷಗಳು ಪ್ರತಿಭಟನೆ ಮಾಡುವುದರ ಹಿಂದೆ ರಾಜಕೀಯ ತಂತ್ರವಿದ್ದು, ಪೊಲೀಸ್ ಇಲಾಖೆ ಆಡಳಿತ ಪಕ್ಷದ ರಾಜಕೀಯ ಕೈಗೊಂಬೆಯಂತೆ ವರ್ತಿಸುತ್ತಿದೆ. ವಿನಾ ಕಾರಣ ಹಿಂದೂ ಯುವಕರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸಲು  ಪ್ರಯತ್ನ ನಡೆಯುತ್ತಿದ್ದು, ಪೊಲೀಸ್ ಠಾಣೆಗೆ ಘೆರಾವ್ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.


ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ದೇಶದ್ರೋಹಿಗಳಿಗೆ ರಾಜಮರ್ಯಾದೆ ದೊರಕುತ್ತಿದೆ. ದೇಶ ಪ್ರೇಮಿಗಳನ್ನು ಇಂದು ಅಪರಾಧಿಗಳಂತೆ ಕಂಡು ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ಬೆದರಿಕೆ ತಂತ್ರ ಅನುಸರಿಸಲಾಗುತ್ತಿದೆ ಎಂದು ಶಾಸಕರು ಹೇಳಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top