ರೋಬೋಸೋಫ್ಟ್ ಟೆಕ್ನಾಲಜೀಸ್ ಸಂಸ್ಥೆಯ ಮಾನವ ಸಂಪನ್ಮೂಲ ಮತ್ತು ಪ್ರತಿಭಾನ್ವೇಷಣಾ ಅಧಿಕಾರಿ ಶ್ರೀಮತಿ ಲಕ್ಷ್ಮಿ ಶೆಟ್ಟಿ ಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಂಡ್ ಮಷೀನ್ ಲರ್ನಿಂಗ್, ಸೈಬರ್ ಸೆಕ್ಯೂರಿಟಿ ಆಂಡ್ ಸೈಬರ್ ಫೊರೆನ್ಸಿಕ್ಸ್, ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯ ರಿಂಗ್, ರೊಬೋಟಿಕ್ಸ್ ಆಂಡ್ ಎಐಎಂಎಲ್, ಕ್ಲೌಡ್ ಕಂಪ್ಯೂಟಿಂಗ್ ಆಂಡ್ ಮೊಬೈಲ್ ಟೆಕ್ನಾಲಜಿ ಮತ್ತು ಡೇಟಾ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಸಿದ್ಧಪಡಿಸಿದ 81 ನವೀನ ರೀತಿಯ ಪ್ರೊಜೆಕ್ಟ್ ಮಾದರಿಗಳನ್ನು ಪ್ರದರ್ಶಿಸಿದರು.
ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಮುಖ್ಯಸ್ಥರಾದ ಡಾ. ರಾಮಕೃಷ್ಣ ಎನ್. ಹೆಗಡೆ, ಕಾಲೇಜಿನ ಪ್ರೊಜೆಕ್ಟ್ ಸಮನ್ವಯಕಾರರಾದ ಪ್ರೊ. ಮಹೇಶ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳಾದ ಲಕ್ಷ್ಮಿ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಸಿದ್ಧಪಡಿಸಿದ ಪ್ರೊಜೆಕ್ಟ್ ಮಾದರಿಗಳನ್ನು ಶ್ಲಾಘಿಸಿದರು. ಒಂದೇ ಕ್ಷೇತ್ರದಲ್ಲಿ ಗಮನಹರಿಸಿ, ಆ ಕ್ಷೇತ್ರದಲ್ಲಿ ಪರಿಣತಿಯನ್ನು ಪೂರ್ಣವಾಗಿ ಪಡೆಯುವತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕೆಂದು ಅವರು ಹೇಳಿದರು. ಇಂದಿನ ಕಂಪ್ಯೂಟರ್ ಯುಗದಲ್ಲಿ ಲಭ್ಯವಿರುವ ಮುಕ್ತ ಮೂಲ ಪರಿಕರಗಳನ್ನು ಸಮರ್ಪಕವಾಗಿ ಬಳಸಿ ನಿಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿದ್ದಲ್ಲಿ ಅದು ಯಶಸ್ಸಿಗೆ ಕಾರಣವಾಗುತ್ತದೆ. ಕ್ಯಾಂಪಸ್‌ನ ಹೊರಗೆ ನಿಮ್ಮ ಯೋಜನೆಗಳನ್ನು ಪ್ರದರ್ಶಿಸಬೇಕು, ಇತರರು ಸಿದ್ಧಪಡಿಸಿದ ಪ್ರಾಜೆಕ್ಟ್ ಮಾದರಿಗಳನ್ನು ಅವಲೋಕಿಸಬೇಕು, ವಿವಿಧ ವೇದಿಕೆಗಳಲ್ಲಿ ನಿಮ್ಮ ಪ್ರಾಜೆಕ್ಟ್ ಯೋಜನೆಗಳ ಮಾದರಿಗಳನ್ನು ಪ್ರದರ್ಶಿಸಬೇಕು, ನಿಮ್ಮ ವೆಬ್ ಪೋರ್ಟ್‌ಫೋಲಿಯೊವನ್ನು ರಚಿಸಬೇಕು, ಹಾಗೂ ಲಿಂಕ್ಡ್‌ಇನ್‌ನಲ್ಲಿ ತಾಂತ್ರಿಕ ಬ್ಲಾಗ್‌ಗಳನ್ನು ಬರೆಯಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇಂದಿನ ಯೋಜನೆಗಳಿಗೆ ನವೀನತೆಯ ಅಗತ್ಯವಿದೆ, ನೈಜ ಸಮಯದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ, ಸಂವಹನ ಕೌಶಲ್ಯಗಳನ್ನು ಸುಧಾರಿಸಿ, ಆ ಮೂಲಕ ನಿಮ್ಮ ವೃತ್ತಿಪರ ಮಾಹಿತಿಯ ಪರಿಚಯಕ್ಕೆ ಉತ್ತಮ ಮೌಲ್ಯವನ್ನು ಸೇರಿಸಬೇಕು ಎಂದು ಹೇಳಿದರು.
ಅಧ್ಯಕ್ಷೀಯ ಭಾಷಣವನ್ನು ಮಾಡಿದ ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಲು ಮತ್ತು ನವೀನ ವಿಚಾರಗಳನ್ನು ಪ್ರದರ್ಶಿಸಲು ಇಂತಹ ಪ್ರಾಜೆಕ್ಟ್ ಮಾದರಿಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಉತ್ತಮ ಅವಕಾಶವನ್ನು ನೀಡುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳು ಸೃಜನಶೀಲತೆಯನ್ನು ಪರಿವರ್ತಿಸಬೇಕು, ವ್ಯವಹಾರ ವಿಶ್ಲೇಷಣೆಯನ್ನು ಅರ್ಥಮಾಡಿಕೊಳ್ಳಬೇಕು. ನವೀಕರಿ ಸಬಹುದಾದ ಇಂಧನ, ಸ್ಮಾರ್ಟ್ ಆರೋಗ್ಯ ರಕ್ಷಣೆ, ಮಾನವ ಬುದ್ಧಿಮತ್ತೆಯ ಮೂಲಕ ಕೃತಕ ಬುದ್ಧಿಮತ್ತೆ, ಬೌದ್ಧಿಕ ಆಸ್ತಿ ಹಕ್ಕುಗಳು, ನಾವೀನ್ಯತೆ, ವೈದ್ಯಕೀಯ ಸವಾಲುಗಳು ಇವೇ ಮೊದಲಾದ ಕ್ಷೇತ್ರಗಳಲ್ಲಿ ಇನ್ನಷ್ಟು ಸಂಶೋಧನೆ ಯನ್ನು ಮಾಡಬೇಕು ಎಂದು ಸಲಹೆ ನೀಡಿದರು. ಆವಿಷ್ಕಾರವು ನಾವೀನ್ಯತೆಯಾಗುತ್ತದೆ, ಇಂದಿನ ಮೂಲಮಾದರಿಗಳು ನಾಳೆಯ ಜೀವನವನ್ನು ಬದಲಾಯಿಸುವ ನಾವೀನ್ಯತೆಯಾಗಿರುತ್ತವೆ. ಆದ್ದರಿಂದ, ಪ್ರಸ್ತುತ ಸಮಸ್ಯೆಗಳನ್ನು ಸುಧಾರಿಸುವ ಮತ್ತು ಮಾರುಕಟ್ಟೆಗೆ ಬಿಡುಗಡೆ ಮಾಡುವಂತಹ ಉತ್ಪನ್ನಗಳನ್ನು ತಯಾರಿಸುವಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿ ಲಕ್ಷ್ಮಿ ಶೆಟ್ಟಿ ಹಾಗೂ ಇತರರು ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಿದ್ಧಪಡಿಸಿದ ಪ್ರಾಜೆಕ್ಟ್ ಮಾದರಿಗಳನ್ನು ಪರಿಶೀಲಿಸಿದರು. ಉಪನ್ಯಾಸಕರನ್ನು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಕಾಲೇಜಿನ ಮುಖ್ಯಸ್ಥರಾದ ಡಾ. ರಾಮಕೃಷ್ಣ ಎನ್. ಹೆಗಡೆ ಸ್ವಾಗತ ಭಾಷಣ ಮಾಡಿದರು. ಪ್ರೊ. ಕೆ. ಶ್ರೀನಾಥ್ ರಾವ್ ಮುಖ್ಯ ಅತಿಥಿ ಲಕ್ಷ್ಮಿ ಶೆಟ್ಟಿಯವರನ್ನು ಸಭೆಗೆ ಪರಿಚಯಿಸಿದರು. ಕಾರ್ಯಕ್ರಮದ ಸಂಚಾಲಕ ಪ್ರೊ. ಮಹೇಶ್ ಕುಮಾರ್ ಅಂತಿಮ ವರ್ಷದ ಪ್ರೊಜೆಕ್ಟ್ ಮಾದರಿಗಳ ಕಿರುಚಿತ್ರಣವನ್ನು ನೀಡಿದರು. ಪ್ರೊ. ವರ್ಷಾ ಬಂಗೇರ ವಂದನಾರ್ಪಣೆ ಸಲ್ಲಿಸಿದರು. ವಿದ್ಯಾರ್ಥಿನಿ ಕುಮಾರಿ ಪ್ರಜ್ಞಾ ಪ್ರಾರ್ಥನೆ ಸಲ್ಲಿಸಿದರು. ವಿದ್ಯಾರ್ಥಿಗಳಾದ ಇವಾನ್ ಆಂಟೋ ಮತ್ತು ಕುಮಾರಿ ಅನಾಮಿಕ ಕುವರ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತ ರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ