ಮಂಗಳೂರು: ಮಂಗಳೂರಿನ ಜೈಲ್‌ನಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾದ ಜಾಮರ್ ನಿಂದಾಗಿ ಕಳೆದ ಕೆಲವು ವಾರಗಳಿಂದ ಸ್ಥಳೀಯ ನಿವಾಸಿಗಳು, ವ್ಯಾಪಾರಿಗಳು, ಉದ್ಯೋಗಿಗಳಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಕೇವಲ ಭರವಸೆ ಮಾತ್ರ ನೀಡಲಾಗುತ್ತಿದೆ.
ಸದ್ಯ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವಂತೂ ನಾಗರಿಕರು ಬೀದಿಗೆ ಇಳಿಯದಿದ್ದರೆ ಅದೆಂತಹದೇ ಸಮಸ್ಯೆಯಿದ್ದರೂ ಕ್ಯಾರೇ ಎನ್ನುತ್ತಿಲ್ಲ. ಹಾಗಾಗಿ ಸಾರ್ವಜನಿಕರು ಜಾಮರ್ ನಿಂದಾಗಿ ಇಲ್ಲಿ ಅನುಭವಿಸುತ್ತಿರುವ ತೊಂದರೆಯ ವಿರುದ್ಧ ಬೀದಿಗೆ ಇಳಿಯುವುದು ಅನಿವಾರ್ಯವಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಶನಿವಾರ (ಏ.5) ರಸ್ತೆ ತಡೆಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರ ಪರವಾಗಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಸ್ಥಳೀಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಒಗ್ಗೂಡಿ ಭಾಗವಹಿಸುವ ಮೂಲಕ ತಮ್ಮ ಸಹನೆಗೂ ಒಂದು ಮಿತಿ ಇದೆ ಎಂಬುದನ್ನು ಅಧಿಕಾರಶಾಹಿಗಳಿಗೆ ಅರ್ಥ ಮಾಡಿಸಿ ನಿದ್ರೆಯಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಎಚ್ಚರಿಸೋಣ ಎಂದು ಶಾಸಕರು ಕರೆ ನೀಡಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ