ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶ: ವಿವೇಕಾನಂದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Upayuktha
0

ವಾಣಿಜ್ಯ ವಿಭಾಗದ ಅನುಶ್ರೀ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ರಾಂಕ್ ಹಾಗೂ ತಾಲೂಕಿಗೆ ಪ್ರಥಮ.

ವಿಜ್ಞಾನ ವಿಭಾಗದ ಅನಘ ಡಿ. ಶೆಟ್ಟಿ 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರಾಂಕ್ ಹಾಗೂ ತಾಲೂಕಿಗೆ ಪ್ರಥಮ.



ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್ ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ.


ವಾಣಿಜ್ಯ ವಿಭಾಗದ ಅನುಶ್ರೀ (ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಪಿ. ಸತೀಶ್ ಮರಡಿತ್ತಾಯ ಹಾಗೂ ದೀಪಾ ದಂಪತಿಗಳ ಪುತ್ರಿ) 597 ಅಂಕಗಳೊಂದಿಗೆ ರಾಜ್ಯಕ್ಕೆ 3 ನೇ ರಾಂಕ್ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಅನಘ ಡಿ. ಶೆಟ್ಟಿ (ಪುತ್ತೂರು ತಾಲೂಕಿನ ನೆಹರುನಗರದ ದಿನೇಶ್ ಶೆಟ್ಟಿ ಹಾಗೂ ಸವಿತಾ ಡಿ. ಶೆಟ್ಟಿ ದಂಪತಿಗಳ ಪುತ್ರಿ) 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರಾಂಕ್ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

        

ವಾಣಿಜ್ಯ ವಿಭಾಗದಲ್ಲಿ ಅಪರ್ಣ ಅಡಿಗ ಎ. (ಕಾಸರಗೋಡು ಜಿಲ್ಲೆಯ ಪೆರ್ಲದ ಗೋಪಾಲಕೃಷ್ಣ ಅಡಿಗ ಹಾಗೂ ಆಶಾ ಅಡಿಗ ದಂಪತಿಗಳ ಪುತ್ರಿ) 593 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರಾಂಕ್ ಗಳಿಸಿರುತ್ತಾರೆ.


ಇತ್ತೀಚೆಗೆ ಪ್ರಕಟಗೊಂಡ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಪಿ. ಯುಕ್ತಶ್ರೀ (ಬೆಂಗಳೂರಿನ ಪಿ ಹೇಮಚಂದ್ರ ಹಾಗೂ ಹೈಮಿತಾ ಪಿ ದಂಪತಿಗಳ ಪುತ್ರಿ) 593 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರಾಂಕ್ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದರು. ಈ ಮೂಲಕ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪುತ್ತೂರು ತಾಲೂಕಿನಲ್ಲಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಎಲ್ಲಾ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದ ಸಾಧನೆ ಮಾಡಿದ್ದಾರೆ. 

 

ಕಾಲೇಜಿನ 349 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 392 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ ಹಾಗೂ 185 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 100 ಕ್ಕೆ 100 ಅಂಕಗಳನ್ನು ಗಳಿಸಿರುತ್ತಾರೆ. 


ಇದರೊಂದಿಗೆ ಪುತ್ತೂರಿನಲ್ಲಿ ರಾಜ್ಯಮಟ್ಟದಲ್ಲಿ ಅತ್ಯಧಿಕ ರಾಂಕ್ ಗಳನ್ನು ಗಳಿಸಿದ ಏಕೈಕ ವಿದ್ಯಾಸಂಸ್ಥೆ ಎನ್ನುವ ಹೆಗ್ಗಳಿಕೆಗೆ ವಿವೇಕಾನಂದ ಪದವಿಪೂರ್ವ ಕಾಲೇಜು ಪಾತ್ರವಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ- ಉಪನ್ಯಾಸಕೇತರ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top