ಪಿಯುಸಿಯಲ್ಲಿ ರಾಜ್ಯಕ್ಕೆ 5 ನೇ ರ‍್ಯಾಂಕ್ ಗಳಿಸಿದ ಶ್ರೀವಿದ್ಯಾ ಅವರಿಗೆ ವಿವೇಕಾನಂದ ಕಾಲೇಜಿನಿಂದ ಸನ್ಮಾನ.
ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 595 ಅಂಕ ಪಡೆದು ರಾಜ್ಯಕ್ಕೆ ಐದನೇಯ ಸ್ಥಾನ ಗಳಿಸಿದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಶ್ರೀವಿದ್ಯಾ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಮಾತನಾಡಿ ವಿದ್ಯಾರ್ಜನೆಯ ವೇಳೆ ನಿರಂತರ ಪ್ರಯತ್ನ ಹಾಗೂ ಶ್ರಧ್ಧೆಯಿದ್ದರೆ ವಿದ್ಯಾರ್ಥಿಗಳಿಗೆ ಸಾಧನೆಯ ಹಾದಿಯಲ್ಲಿ ಸಾಗುವುದು ಕಠಿಣವೇನಲ್ಲ. ಶ್ರೀವಿದ್ಯಾ ಅವರ ಸಾಧನೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಒಂದು ಸ್ಫೂರ್ತಿಯಾಗಲಿ ಎಂದು ವಿದ್ಯಾರ್ಥಿನಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ಉಪಪ್ರಾಂಶುಪಾಲ ಪ್ರೊ.ಶಿವಪ್ರಸಾದ್ ಕೆ.ಎಸ್, ಸಹಾಯಕ ಪರೀಕ್ಷಾಂಗ ಕುಲಸಚಿವ ಶ್ರೀಕೃಷ್ಣ ಗಣರಾಜ ಭಟ್, ವಿದ್ಯಾರ್ಥಿನಿಯ ಹೆತ್ತವರಾದ ನಾರಾಯಣ ಭಟ್ ಹಾಗೂ ಶೈಲಶ್ರೀ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ನಿರಂತರ ಪ್ರಯತ್ನದಿಂದ ಗೆಲ್ಲಲು ಸಾಧ್ಯವಿದೆನಾನು ಸರಕಾರಿ ಕಾಲೇಜಿನ ವಿದ್ಯಾರ್ಥಿನಿ ಎನ್ನಲು ಹೆಮ್ಮೆಯಿದೆ. ಇಲ್ಲಿ ನನ್ನ ವಿದ್ಯಾಭ್ಯಾಸಕ್ಕೆ ಯಾವುದೇ ಕೊರತೆ ಇರಲಿಲ್ಲ. ಉತ್ತಮ ಉಪನ್ಯಾಸಕ ವರ್ಗ ಹಾಗೂ ಹೆತ್ತವರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ.- ಶ್ರೀವಿದ್ಯಾ
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ