ಭಾರತದಲ್ಲಿ ಸಂಶೋಧನೆಗಿದೆ ಅಗಾಧ ಅವಕಾಶ: ಡಾ. ಕಾಂತೇಶ ವಿ.ಎಸ್

Upayuktha
0



ಪುತ್ತೂರು: ಭಾರತ ಜನಸಂಖ್ಯೆಯಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಅದೇ ಸಂಶೋಧನೆಯ ವಿಚಾರಕ್ಕೆ ಬಂದಾಗ ತುಂಬಾ ಹಿಂದಿದೆ. ಹಾಗೆಂದು ಭಾರತದಲ್ಲಿ ಸಂಶೋಧನೆಗೆ ಅವಕಾಶಗಳೇ ಇಲ್ಲ ಎಂದೇನಿಲ್ಲ. ಸರಿಯಾದ ವಿಷಯವನ್ನು ಆಯ್ದುಕೊಂಡು ಸಂಶೋಧನೆ ಮಾಡಿದರೆ ಅವಕಾಶಗಳ ಬಾಗಿಲೇ ತೆರೆದುಕೊಳ್ಳುತ್ತದೆ. ಹೊಸ ಹೊಸ ವಿಷಯಗಳನ್ನು ಅಧ್ಯಯನವನ್ನು ಮಾಡಿ, ವ್ಯವಹಾರ ಹಾಗೂ ಇನ್ನಿತರ ಕ್ಷೇತ್ರದಲ್ಲಿ ಸುಲಭವಾಗಿ ಯಶಸ್ಸನ್ನು ಗಳಿಸಬಹುದು ಎಂದು ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಕಾಂತೇಶ ವಿ.ಎಸ್. ಹೇಳಿದರು.


ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ(ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಂಶೋಧನಾ ಕೇಂದ್ರ, ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ “ರಿಸರ್ಚ್: ಫ್ರಮ್ ಡ್ರಾಫ್ಟ್ ಟು ಪಬ್ಲಿಕೇಷನ್” ಎಂಬ ವಿಷಯದ ಕುರಿತು ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಉಪನ್ಯಾಸ ನೀಡಿದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ಅಧ್ಯಯನದ ವಿಚಾರವನ್ನು ಆಯ್ದುಕೊಳ್ಳುವಾಗ ತಮ್ಮ ಆಸಕ್ತಿಯನ್ನು ಗಮನಿಸಿ ಆರಿಸಿಕೊಳ್ಳಬೇಕು. ಸಮಾಜಕ್ಕೆ ಉಪಯೋಗವಾಗುವ, ವೈಯಕ್ತಿಕವಾಗಿ ಲಾಭವಾಗುವುದರ ಜೊತೆಗೆ ಹೊಸತನಗಳನ್ನು ಹೊಂದಿರುವ ವಿಷಯವನ್ನು ಆಯ್ದುಕೊಳ್ಳಬೇಕು ಎಂದು ಹೇಳಿದರು. 


ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪರೀಕ್ಷಾಂಗ ಕುಲಸಚಿವ ಡಾ. ಹೆಚ್. ಜಿ. ಶ್ರೀಧರ್, ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ, ಸ್ನಾತಕೋತ್ತರ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದ್ವಿತೀಯ ಎಂಕಾಂ ವಿದ್ಯಾರ್ಥಿ ರಕ್ಷಿತ್ ಸ್ವಾಗತಿಸಿ, ರಕ್ಷಿತಾ ವಂದಿಸಿ, ತೇಜಸ್ವಿ ನಿರೂಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter      


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top