ವಿಸಿಇಟಿ ಪುರುಷರ ಕಬಡ್ಡಿ ತಂಡ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Upayuktha
0




ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ.


ಮೈಸೂರಿನ ವಿದ್ಯಾವರ್ಧಕ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಮ್ಯಾಟ್ ಅಂಕಣದಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡವು ರನ್ನರ್ ಅಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.


ಮಂಗಳೂರಿನಲ್ಲಿ ನಡೆದ ಮಂಗಳೂರು ವಿಭಾಗಮಟ್ಟದ ಸ್ಪರ್ಧೆಯಲ್ಲಿ ಕಾಲೇಜು ತಂಡವು ದ್ವಿತೀಯ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿತ್ತು. ಅಂತಿಮ ವರ್ಷದ ಎಂಬಿಎ ವಿಭಾಗದ ಬಬಿತ್‌ರಾಜ್, ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ನಿತ್ಯ.ಎನ್, ಪ್ರಥಮ ಎಲೆಕ್ಟ್ರಾನಿಕ್ಸ್ ವಿಭಾಗದ ತೇಜಸ್ ಪ್ರಥಮ ಮೆಕ್ಯಾನಿಕಲ್ ವಿಭಾಗದ ಹಿತೇಶ್, ವಿಜೇತ್, ಗೌರವ್, ಪ್ರತೀಕ್, ಯಶಸ್, ಪ್ರಥಮ ಎಲೆಕ್ಟ್ರಾನಿಕ್ಸ್ ವಿಭಾಗದ ವಂಶಿಕ್, ದ್ವಿತೀಯ ಮೆಕ್ಯಾನಿಕಲ್ ವಿಭಾಗದ ಭುವನ್‌ರಾಮ್, ಅಂತಿಮ ಎಲೆಕ್ಟ್ರಾನಿಕ್ಸ್ ವಿಭಾಗದ ಗುರುಚರಣ್ ಮತ್ತು ಅಂತಿಮ ಎಐಎಂಎಲ್ ವಿಭಾಗದ ಪ್ರಫುಲ್ ವಿಜೇತ ತಂಡದ ಆಟಗಾರರಾಗಿದ್ದಾರೆ.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಕಬಡ್ಡಿ ಆಟಗಾರ ಸತ್ಯನ್ ದೊಡ್ಡಮನೆ ಹಾಗೂ ಕಬಕ ಮಹಾದೇವಿ ಕ್ಲಬ್‌ನ ಹಿರಿಯ ಕಬಡ್ಡಿ ಆಟಗಾರ ವಸಂತ ಗೌಡ ತಂಡಕ್ಕೆ ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top