ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 595 ಅಂಕ ಪಡೆದು ರಾಜ್ಯಕ್ಕೆ ಐದನೇಯ ಸ್ಥಾನ ಗಳಿಸಿದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಶ್ರೀವಿದ್ಯಾ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್ ಮಾತನಾಡಿ ವಿದ್ಯಾರ್ಥಿನಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ವಿದ್ಯಾರ್ಥಿನಿಯ ಹೆತ್ತವರು ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ