ವಿವೇಕಾನಂದ ಪಿಯು ಕಾಲೇಜು: ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

Upayuktha
0


 ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಹಲವಾರು ರ್‍ಯಾಂಕ್‌ಗಳನ್ನು ಬಾಚಿಕೊಳ್ಳುವುದರೊಂದಿಗೆ ಉತ್ತಮ ಸಾಧನೆಯನ್ನು ಮೆರೆದಿದ್ದಾರೆ. 


ಸಾಧಕ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನವನ್ನು ಮಾಡಲಾಯಿತು. ಕಾಲೇಜು ಆಡಳಿತಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆಯನ್ನು ಸಲ್ಲಿಸುತ್ತಾ, ನಿರಂತರವಾದ ಶ್ರಮ, ಸಾಧನೆ ನಮ್ಮನ್ನು ಶಿಖರಕ್ಕೆ ಕೊಂಡೊಯ್ದು ನಿಲ್ಲಿಸಬಲ್ಲದು ಎಂಬುದನ್ನು ನಮ್ಮ ವಿದ್ಯಾರ್ಥಿಗಳು ಇಂದು ಸಾಬೀತುಪಡಿಸಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣವನ್ನು ನೀಡುವುದರೊಂದಿಗೆ ಅವರ ಬೌದ್ಧಿಕ ವಿಕಸನಕ್ಕೆ ಪೂರಕವಾದ ಪರಿಸರವನ್ನು ಒದಗಿಸಿ ಅವರ ಸಂಪೂರ್ಣ ಬೆಳವಣಿಗೆಯಲ್ಲಿ ಸಹಕರಿಸುತ್ತಿದೆ ಎಂದು ನುಡಿದರು.


ಕಾರ್ಯಕ್ರಮದಲ್ಲಿ ರಾಜ್ಯಮಟ್ಟದಲ್ಲಿ ವಿವಿಧ ರ್‍ಯಾಂಕ್‌ಗಳನ್ನು ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ, ಸನ್ಮಾನಗೈದು ಸಿಹಿತಿಂಡಿ ಹಂಚಲಾಯಿತು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರುಗಳಾದ ಡಾ. ಕೆ ಎನ್ ಸುಬ್ರಹ್ಮಣ್ಯ, ವತ್ಸಲಾ ರಾಜ್ಞಿ, ಉಪಪ್ರಾಂಶುಪಾಲರಾದ ದೇವಿಚರಣ್ ರೈ,ವಿದ್ಯಾರ್ಥಿಗಳ ಹೆತ್ತವರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉಪನ್ಯಾಸಕಿ ದಯಾಮಣಿ ಟಿ.ಕೆ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top