ಬೆಂಗಳೂರು: ಕಾಂತರಾಜ ಆಯೋಗ ಸಿದ್ಧಪಡಿಸಿದ ಜಾತಿಗಣತಿ ವರದಿ ಸಂಪೂರ್ಣ ಅವೈಜ್ಞಾನಿಕ ವಾಗಿದ್ದು, ಅದನ್ನು ತಿರಸ್ಕರಿಸಬೇಕು ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಬ್ರಾಹ್ಮಣರ ಜನಸಂಖ್ಯೆ 44 ಲಕ್ಷದಷ್ಟಿದೆ, ಆದರೆ ವರದಿಯಲ್ಲಿ ಕೇವಲ 12 ಲಕ್ಷ ಎಂದು ತೋರಿಸಲಾಗಿದೆ ಎಂದು ಹೇಳಿದ್ದಾರೆ.
'ನಾನು ಮಂಡಳಿಯ ಅಧ್ಯಕ್ಷನಾಗಿದ್ದ ವೇಳೆ ರಾಜ್ಯದಾದ್ಯಂತ ಸುತ್ತಾಡಿದ್ದೆ ಮತ್ತು ಬ್ರಾಹ್ಮಣರಲ್ಲಿ 44 ಪಂಗಡಗಳು ಇರುವುದನ್ನು ದಾಖಲಿಸಿದ್ದೆ. ಆದರೆ ವರದಿಯಲ್ಲಿ ಉಪಜಾತಿಗಳನ್ನು ಪರಿಗಣಿಸಿಯೇ ಇಲ್ಲ, ಇದು ಬ್ರಾಹ್ಮಣರ ಉಪಜಾತಿಗಳನ್ನು ಒಡೆಯುವ ತಂತ್ರವಾಗಿದೆ. ಸರ್ಕಾರ ಈ ವರದಿಯನ್ನು ತಿರಸ್ಕರಿಸಬೇಕು, ಇಲ್ಲವಾದರೆ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಹೇಳಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ