ಎಸ್.ಡಿ.ಎಂ. ಬಿ.ಎಡ್. ಕಾಲೇಜು, ಉಜಿರೆ: ವಿದ್ಯಾರ್ಥಿ ಸಂಘದ ಉದ್ಘಾಟನೆ

Upayuktha
0

ಉಜಿರೆ: ಯಾವುದೇ ವಿದ್ಯಾಸಂಸ್ಥೆಯ ಏಳಿಗೆಯಲ್ಲಿ ವಿದ್ಯಾರ್ಥಿ ಸಂಘದ ಪಾತ್ರ ಹಿರಿದಾಗಿದೆ. ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳ ಹಾಗೂ ವಿದ್ಯಾಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಶ್ರೀಮತಿ ಲಿಲ್ಲಿ ಪಿ ವಿ, ಉಪನ್ಯಾಸಕರು, ಸರಕಾರಿ ಪದವಿ ಪೂರ್ವ ಕಾಲೇಜು ನಡ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.


ಕಾರ್ಯಕ್ರಮ ಉದ್ಘಾಟಿಸಿದ ಇವರು ಪದಾಧಿಕಾರಿಗಳಿಗೆ ಪ್ರತಿಜ್ಞೆಯನ್ನು ಬೋಧಿಸಿ ನಾಯಕ ಹಾಗೂ ನಾಯಕತ್ವದ ಗುಣಗಳನ್ನು ತಿಳಿಸಿಕೊಟ್ಟರು. ಭಾವೀ ಶಿಕ್ಷಕರಾಗುವ ಪ್ರಶಿಕ್ಷಣಾರ್ಥಿಗಳ ಕುರಿತು ಮಾತನಾಡಿ ಸದೃಢ ದೇಶದ ರಚನೆಗೆ ಸಮರ್ಥ ಗುರುವಿನ ಬಲ ಬೇಕಾಗಿದೆ. ಕಳಂಕರಹಿತ ಅತ್ಯುತ್ತಮ ವೃತ್ತಿ ಇದಾಗಿದೆ. ಆದುದರಿಂದ ಮಣ್ಣಿನ ಮುದ್ದೆಯಂತಿರುವ ವಿದ್ಯಾರ್ಥಿಯೊಳಗಿನ ಪ್ರತಿಭೆಯನ್ನು ಸಮಾಜದಲ್ಲಿ ಕಂಗೊಳಿಸುವಂತೆ ಮಾಡುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕಿ ಶ್ರೀಮತಿ ಅನುಷ ಡಿ ಜೆ ಇವರು ಕಾರ್ಯಕ್ರಮದ ಕುರಿತು ಮಾತನಾಡಿ, ಸಮಾಜದ ಕಲ್ಯಾಣಕ್ಕೆ ನಾಯಕರ ಅಗತ್ಯ ಇದೆ. ನಾಯಕತ್ವ ಭಾವವನ್ನು ಎಲ್ಲಾ ಪ್ರಶಿಕ್ಷಣಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಹಾಗಿದ್ದರೆ ಮಾತ್ರ ಉತ್ತಮ ಶಿಕ್ಷಕರಾಗಿ ಹೊರಹೊಮ್ಮಲು ಸಾಧ್ಯ ಎಂದರು.


ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ವಿದ್ಯಾರ್ಥಿ ಸಂಘದ ಸಂಯೋಜಕ ತಿರುಮಲೇಶ್ ರಾವ್ ಎನ್ ಕೆ ಇವರು ನಾಯಕತ್ವವು ಒಂದು ಅದ್ಭುತ ಗುಣವಾಗಿದೆ. ಹಲವು ಅನುಭವಗಳನ್ನು ನಾಯಕತ್ವವು ನೀಡುತ್ತದೆ. ವಿದ್ಯಾರ್ಥಿ ಸಂಘದ ನಾಯಕರು ಹಲವು ಕಾರ್ಯಕ್ರಮ ಸಂಯೋಜನೆಯಲ್ಲಿ ಮಧ್ಯವರ್ತಿಗಳೆಂದರೆ ತಪ್ಪಾಗದು ಹಾಗೂ 2024-25 ನೇ ಸಾಲಿನ ಕಾರ್ಯ ಯೋಜನೆಗಳ ಜವಾಬ್ದಾರಿ ವಿದ್ಯಾರ್ಥಿ ಪದಾಧಿಕಾರಿಗಳ ಮೇಲಿದೆ ಎಂದರು.


ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕಿ ವೀಕ್ಷದೀಪ ಆರ್ ಎಸ್ ಹಾಗೂ ಕಾರ್ಯದರ್ಶಿ ದೀಕ್ಷಿತ್ ಎಂ ಇವರು ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ಉಪನ್ಯಾಸಕರಾದ ಶ್ರೀಮತಿ ವಿದ್ಯಾಶ್ರೀ ಪಿ, ಶ್ರೀ ಮಂಜು ಆರ್, ಶ್ರೀಮತಿ ಪ್ರಿಯದರ್ಶಿನಿ ಜಿ ಭಟ್, ಕು. ಆದ್ಯಾ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಸಂತೋಷ್ ಟಿ ಯು ಸ್ವಾಗತಿಸಿ, ವಿಶ್ಮಿತಾ ಅತಿಥಿಗಳನ್ನು ಪರಿಚಯಿಸಿ, ವಿಶಾಲ ವಂದಿಸಿ, ಫಾತಿಮಾತ್ ರಾಫಿಯಾ ಕಾರ್ಯಕ್ರಮವನ್ನು ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top