ಎಸ್‌ಡಿಎಂ ಕಾಲೇಜು ಉಜಿರೆ: ಎನ್ನೆಸ್ಸೆಸ್ ವಾರ್ಷಿಕ ಚಟುವಟಿಕೆ ಸಮಾರೋಪ

Upayuktha
0

ಧರ್ಮಸ್ಥಳ:
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಏ.1 ರಂದು ನಡೆಯಿತು.

ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಹಾಗೂ ಹಿರಿಯ ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ಬಿ. ಎ. ಕುಮಾರ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಎನ್ನೆಸ್ಸೆಸ್ ಎನ್ನುವುದು ವಿದ್ಯಾರ್ಥಿ ಜೀವನದಲ್ಲಿ ತಮ್ಮನ್ನು ತಾವು ಸೇವೆಯಲ್ಲಿ ತೊಡಗಿಸಿ ಕೊಳ್ಳುವುದಕ್ಕೆ ಒಂದು ಉತ್ತಮ ವೇದಿಕೆ. ವಿದ್ಯಾರ್ಥಿ ಜೀವನದಲ್ಲಿ ನೀವೆಲ್ಲರೂ ಪದವಿ ಮುಗಿಸುವುದಕ್ಕೂ ಮೊದಲೇ ಉತ್ತಮ ಅನು ಭವಗಳನ್ನು ಹೊಂದಿದ್ದೀರಿ. ಈ ವಿಷಯದಲ್ಲಿ ನಿಮ್ಮ ಬಗ್ಗೆ ನೀವೇ ಹೆಮ್ಮೆ ಇಟ್ಟುಕೊಳ್ಳಿ. ಒಂದು ಬಾರಿ ಎನ್ನೆಸ್ಸೆಸ್ ಸ್ವಯಂ ಸೇವಕ ರಾದವರು ಕೊನೆಯವರೆಗೂ ಸ್ವಯಂಸೇವಕರಾಗಿಯೇ ಇರುತ್ತಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಂಶುಪಾಲೆ ನಂದಾ ಕುಮಾರಿ ಕೆ. ಪಿ, ನಮ್ಮ ಕಾಲೇಜಿನ ಎನ್ನೆಸ್ಸೆಸ್ ಘಟಕ ನಮ್ಮ ಕಾಲೇಜಿನ ಹಲವು ಹೆಮ್ಮೆಗಳಲ್ಲಿ ಒಂದು ಎಂದರು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎನ್ನೆಸ್ಸೆಸ್ ಘಟಕ ನಡೆಸಿದ ಕಾರ್ಯಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವಯಂಸೇವಕಿ ದೀಪ ವಾರ್ಷಿಕ ವರದಿ ವಾಚಿಸಿದರು. ಸ್ವಯಂಸೇವಕರಾದ ರಾಮಕೃಷ್ಣ, ವಿಶ್ವಾಸ್, ವಿನ್ಯಾಸ್, ದೀಪ ಮತ್ತು ಶ್ವೇತಾ ಎನ್ನೆಸ್ಸೆಸ್ ಅನುಭವ ಹಂಚಿಕೊಂಡರು.

ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ವರ್ಷ ‘ಬದುಕು ಕಟ್ಟೋಣ ಬನ್ನಿ’ ತಂಡದೊಂದಿಗೆ ಕೈ ಜೋಡಿಸಿ ನಡೆಸಿದ ಗದ್ದೆ ನಾಟಿ ಕಾರ್ಯಕ್ರಮವು ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ಸೇರಿರುವುದು ಎಲ್ಲರಿಗೂ ಹೆಮ್ಮೆಯ ವಿಷಯ. ಇದರ ಜೊತೆಗೆ ಈ ಶೈಕ್ಷಣಿಕ ವರ್ಷದಲ್ಲಿ ನಮ್ಮ ತಂಡದಿಂದ  500ಕ್ಕೂ ಹೆಚ್ಚು ಯುನಿಟ್ ರಕ್ತ ಸಂಗ್ರಹಣೆಯಾಗಿ ಹಲವರಿಗೆ ಅದರಿಂದ ಸಹಾಯವಾಗಿದೆ ಎಂಬುದು ಇನ್ನೊಂದು ಸಂತೋಷದ ವಿಚಾರ ಎಂದರು.

ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸ್ವಯಂಸೇವಕರಿಗಾಗಿ ನಡೆದ ಒಂದು ದಿನದ ಸ್ಪರ್ಧೆ ‘ಸೃಜನಾ 2025’ರಲ್ಲಿ ರನ್ನರ್ಸ್ ಪ್ರಶಸ್ತಿ ಪಡೆದ ಸ್ವಯಂಸೇವಕರು ಮತ್ತು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ರಾಜ್ಯಮಟ್ಟದ ಯುವಜನೋತ್ಸವ ದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಎಸ್‌ಡಿಎಂ ಎನ್ನೆಸ್ಸೆಸ್ ಘಟಕವನ್ನು ಪ್ರತಿನಿಧಿಸಿದ್ದ ಸ್ವಯಂಸೇವಕ ಶರಣಪ್ಪರನ್ನು ಸನ್ಮಾನಿಸಲಾಯಿತು.

ಸ್ವಯಂಸೇವಕರಾದ ವಂಶಿ ಸ್ವಾಗತಿಸಿ, ವರ್ಷ ವಿ. ಕಾರ್ಯಕ್ರಮ ನಿರೂಪಿಸಿದರು. ಯೋಜನಾಧಿಕಾರಿ ದೀಪಾ ಆರ್. ಪಿ. ವಂದಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top