ಐಸ್ ಬ್ರೇಕರ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ದೃಶ್ಯ ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ನಾನಾರ್ಥ ವೈಭವ (ವೆರೈಟಿ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದೇ ತಂಡ ಏಪ್ರಿಲ್ 29ರಂದು ನಗರದ ಸಂತ ಅಗ್ನೇಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಿಗಾಗಿ ಏರ್ಪಡಿಸಲಾಗಿದ್ದ ಆಕೃತಿ ಸ್ಪರ್ಧೆಯಲ್ಲಿ ಪ್ರಶಸ್ತಿ ಗಳಿಸಿಕೊಂಡಿತ್ತು.
ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಡಾ. ಸುರೇಶ್ ಹಾಗೂ ಡಾ. ಗಾಯತ್ರಿ ಎನ್. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುತ್ತಾರೆ. ವಿಜೇತ ತಂಡಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ ಗಣಪತಿ ಗೌಡ ಎಸ್. ಅಭಿನಂದನೆ ಸಲ್ಲಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ