ಶ್ರೀ ರಾಮಕೃಷ್ಣಾಶ್ರಮ ಮೈಸೂರು: ಏ. 14ರಿಂದ ವಸಂತ ವಿಹಾರ ಬೇಸಿಗೆ ಶಿಬಿರ

Upayuktha
0


ಮೈಸೂರು: ಮೈಸೂರಿನ ಶ್ರೀ ರಾಮಕೃಷ್ಣಾಶ್ರಮವು ಏ. 14ರಿಂದ 20ರ ವರೆಗೆ ಪ್ರೌಢಶಾಲಾ ಹಂತದ ಮಕ್ಕಳಿಗೆ ವಸಂತ ವಿಹಾರ- ಬೇಸಿಗೆ ಶಿಬಿರ ಆಯೋಜನೆ ಮಾಡಿದೆ. ನಗರದ ಯಾದವಗಿರಿಯಲ್ಲಿರುವ ಆಶ್ರಮದಲ್ಲಿ ನಿತ್ಯ ಬೆಳಗ್ಗೆ 7.45ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದೆ.


ಶಿಬಿರದಲ್ಲಿ ವ್ಯಕ್ತಿತ್ವ ನಿರ್ಮಾಣ, ಯೋಗ, ಧ್ಯಾನ, ಚಿತ್ರಕಲೆ, ಸಂವಹನ ಕೌಶಲ, ಸೃಜನಾತ್ಮಕ ಕಲಿಕೆ ಮತ್ತು ದಿವ್ಯತ್ರಯರಾದ ಶ್ರೀ ರಾಮಕೃಷ್ಣ ಪರಮಹಂಸರು,  ಶಾರದಾಮಾತೆ ಮತ್ತು ಸ್ವಾಮಿ ವಿವೇಕಾನಂದರ ಸಂದೇಶ ಇತ್ಯಾದಿ ವಿಷಯಗಳ ಬಗ್ಗೆ ವಿಷಯ ತಜ್ಞರು ಸಮಗ್ರ  ತರಬೇತಿ ನೀಡಲಿದ್ದಾರೆ.


ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಬಹುದು. ವಿವರ ಮತ್ತು ಹೆಸರು ನೋಂದಣಿಗೆ 0821- 241 7444 ಅಥವಾ  241 2424 ಸಂಪರ್ಕಿಸಬಹುದು ಎಂದು ಆಶ್ರಮದ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top