ಹೊಸದಿಲ್ಲಿ: ಸುಪ್ರೀಂಕೋರ್ಟ್‌ನ ಎಲ್ಲಾ 33 ಹಾಲಿ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದಾಗಿ ಒಮ್ಮತದ ತೀರ್ಮಾನ ಕೈಗೊಂಡಿದ್ದಾರೆ.
ತಮ್ಮ ಆಸ್ತಿ ವಿವರಗಳನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಸಲ್ಲಿಸುವ ತೀರ್ಮಾನ ಕೈಗೊಂಡಿರುವ 33 ನ್ಯಾಯಾಧೀಶರು, ಈ ಮೂಲಕ ಪಾರದರ್ಶಕತೆ ಮೆರೆಯುವ ಐತಿಹಾಸಿಕ ನಿರ್ಣಯ ಕೈಗೊಳ್ಳಲು ಹೆಜ್ಜೆಯಿಟ್ಟಿದ್ದಾರೆ.
ಮಂಗಳವಾರ ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಎಲ್ಲಾ 33 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಆಸ್ತಿ ವಿವರಗಳನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಸಲ್ಲಿಸಲಿದ್ದು, ನ್ಯಾಯಾಧೀಶರ ಆಸ್ತಿ ವಿವರಗಳನ್ನೊಳಗೊಂಡ ಮಾಹಿತಿಯನ್ನು ಸುಪ್ರೀಂಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ