ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ನಿರ್ಬಂಧ ಕೋರಿದ್ದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್‌

Upayuktha
0

ನವದೆಹಲಿ: ಹದಿಮೂರು ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಈ ವಿಚಾರದಲ್ಲಿ  ಕಾನೂನು ರೂಪಿಸಿ ಜಾರಿಗೆ ತರುವಂತೆ ಸಂಸತ್ತನ್ನು ಕೇಳುವಂತೆ ಎಂದು ಸುಪ್ರೀಂಕೋರ್ಟ್‌ ಸೂಚಿಸಿದೆ.

ಜೆ಼ಪ್ಟ್‌ ಫೌಂಡೇಶನ್‌ ಪರವಾಗಿ ಮೋಜಿನಿ ಪ್ರಿಯಾ ಎಂಬ ವಕೀಲರು ಈ ಅರ್ಜಿ ಸಲ್ಲಿಸಿದ್ದರು. ಸಾಮಾಜಿಕ ಮಾಧ್ಯಮಗಳ ಬಳಕೆ ಯಿಂದ ಮಕ್ಕಳ ಮನಸ್ಸುಗಳ ಮೇಲಾಗುವ ದೈಹಿಕ, ಮಾನಸಿಕ ಪರಿಣಾಮವನ್ನು ಉಲ್ಲೇಖಿಸಿದ್ದರು. ಮಕ್ಕಳು ಅವುಗಳನ್ನು ಬಳಸುವು ದನ್ನು ನಿಯಂತ್ರಿಸಲು ವಯಸ್ಸು ಪರಿಶೀಲನೆ, ಬಯೋಮೆಟ್ರಿಕ್‌ ಧೃಡೀಕರಣವನ್ನು ಕಡ್ಡಾಯಗೊಳಿಸಬೇಕು ಎಂದು ಕೋರಿದ್ದರು. ಮಕ್ಕಳ ಸುರಕ್ಷತಾ ನಿಯಮಗಳನ್ನು ಪಾಲಿಸದ ಸಾಮಾಜಿಕ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳು ವಂತೆಯೂ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು. 

ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಮತ್ತು ಆಗಸ್ಟೀನ್‌ ಜಾರ್ಜ್‌ ಮಾಶಿ ಅರ್ಜಿಯನ್ನು ಪರಿಶೀಲಿಸಿ, ಇದು ಕಾನೂನಿನ ವ್ಯಾಪ್ತಿಗೆ ಒಳ ಪಡುತ್ತದೆ. ಈ ಬಗ್ಗೆ ಸಂಬಂಧಿಸಿದವರ ಎದುರು ಪ್ರಸ್ತಾಪಿಸಬೇಕು, ಅವರು ಅದನ್ನು ಎಂಟು ವಾರಗಳೊಳಗಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ. 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top