ರಾಜ್ಯ ಕಾರ್ಮಿಕರ ವಿಮಾ ಯೋಜನೆ ಮಾಹಿತಿ ಕಾರ್ಯಾಗಾರ

Upayuktha
0


ಪುತ್ತೂರು: ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯ ಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯ ಶ್ರೀ ರಾಮ‌ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ಆಶ್ರಯದಲ್ಲಿ ಕಾರ್ಮಿಕ ಭವಿಷ್ಯ ನಿಧಿ ಮಂಗಳೂರು ವಿಭಾಗದ ಜಿಲ್ಲಾ ಸಂಪರ್ಕ ಅಭಿಯಾನದ ಅಡಿಯಲ್ಲಿ ನಿಧಿ ಆಪ್ ಕೇ ನಿಕಟ್ ಎನ್ನುವ ಕಾರ್ಯಕ್ರಮದನ್ವಯ ಇದನ್ನು ಆಯೋಜಿಸಲಾಗಿತ್ತು. ಕಾರ್ಮಿಕ ಭವಿಷ್ಯ ನಿಧಿಗೆ ಸಂಬಂಧಿಸಿದ  ಎಲ್ಲಾ ವಿವರಗಳನ್ನು ಮತ್ತು ಕಾಲಕಾಲಕ್ಕೆ ಬದಲಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಮಿಕ ಭವಿಷ್ಯ ನಿಧಿ ಮಂಗಳೂರು ವಿಭಾಗದ ಆಯುಕ್ತ ರಜೀಬ್ ಮುಖರ್ಜಿ, ಅಕೌಂಟ್ ಆಫೀಸರ್ ಬಿ.ಬಿ.ವೇಣುಗೋಪಾಲ್ ಮತ್ತು ಡಿಪಿಎ ನೀತಾ ಉದಯಶಂಕರ್ ಮಾಹಿತಿ ನೀಡಿದರು.


ರಾಜ್ಯ ಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಂಗಳೂರು ಕಛೇರಿಯ ಸೋಶಿಯಲ್ ಸೆಕ್ಯೂರಿಟಿ ಆಫೀಸರ್ ನೀಲಯ್ಯ ಹಾಗೂ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಅಶ್ವಿನ್ ಕುಮಾರ್ ವಿವರವಾಗಿ ತಿಳಿಸಿದರು.


ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಇಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್‌ ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿಗಳಾದ  ಲಕ್ಷ್ಮೀ ಪ್ರಸಾದ್‌ ಹಾಗೂ ವೆಂಕಟ್ರಮಣ ಭಟ್ ಕಾರ್ಯಕ್ರಮದಲ್ಲಿ ಹಾಜರಿದ್ದರು.


ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ನಡೆಸುವ ಎಲ್ಲಾ ಸಂಸ್ಥೆಗಳ ಮುಖ್ಯಸ್ಥರು ಮತ್ತು ಕಚೇರಿ ಮುಖ್ಯಸ್ಥರು ಹಾಗೂ ಸಿಬ್ಬಂದಿ ಪಾಲ್ಗೊಂಡರು. ಎಲೆಕ್ಟ್ರಾನಿಕ್ಸ್‌ ಪ್ರಯೋಗಾಲಯದ ಮೇಲ್ವಿಚಾರಕ ಹರಿಪ್ರಸಾದ್.ಡಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top