'ಉತ್ತಮ ಮಾತುಗಾರನಾಗಲು ಉತ್ತಮ ಕೇಳುಗನಾಗಬೇಕು'

Upayuktha
0


ಉಡುಪಿ: ಒಬ್ಬ ಉತ್ತಮ ಮಾತುಗಾರನಾಗಬೇಕಾದರೆ ಉತ್ತಮ ಕೇಳುಗನಾಗುವುದು ಅಷ್ಟೇ ಮುಖ್ಯ ಎಂದು ವ್ಯಕ್ತಿತ್ವ ವಿಕಸನ ತರಬೇತಿದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು.


ಅವರು ಅಜ್ಜರಕಾಡು ಪ್ರಜಾಪಿತ ಬ್ರಹ್ಮಾಕುಮಾರಿ ವಿಶ್ವವಿದ್ಯಾಲಯದಲ್ಲಿ ನಡೆದ ಮಕ್ಕಳ ಶಿಬಿರದಲ್ಲಿ ಮಾತನಾಡಿದರು. ನಮ್ಮ ವ್ಯಕ್ತಿತ್ವ ವಿಕಸನದಲ್ಲಿ ಪರಿಣಾಮಕಾರಿ ಸಂವಹನ ಕೌಶಲ್ಯ ಅತೀ ಮುಖ್ಯವಾಗಿದೆ, ಇಂದು ಉತ್ತಮ ಭಾಷಣಕಾರರಿಗೆ ಸಮಾಜದಲ್ಲಿ ಬೇಡಿಕೆ ಇದೆ. ನಾವೆಲ್ಲರೂ ಸಂವಹನ ಕಲೆಯನ್ನು ಬೆಳೆಸಿಕೊಳ್ಳಬೇಕು ಎಂದರು. 


ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸುವುದರೊಂದಿಗೆ ವಿವಿಧ ರೀತಿಯ ಉತ್ತಮ ಹವ್ಯಾಸಗಳನ್ನು ರೂಢಿಸಬೇಕು ಎಂದರು.

ಈ ಸಂದಭ೯ದಲ್ಲಿ ಬಿ.ಕೆ ಸುಮಾ ಮತ್ತು ಕೇಂದ್ರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top