ತುಳುನಾಡು ಸರ್ವಧರ್ಮೀಯರ ನಾಡು: ತಾರಾನಾಥ ಗಟ್ಟಿ ಕಾಪಿಕಾಡ್

Upayuktha
0


ಮೂಡುಬಿದಿರೆ:
ತುಳುನಾಡು ಸರ್ವಧರ್ಮೀಯರ ನಾಡು. ಇಲ್ಲಿ ಜಾತಿ ಮತ ಪಂಥವೆಂಬ ಭೇದವಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ನುಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ  ಕಾಲೇಜಿನ ತುಳು ಸಂಘದ ಸಹಯೋಗದಲ್ಲಿ  ತುಳು ಭಾಷೆ ಬದ್ಕ್ ಗೇನದ ಪೊಲಬು ತುಲಿಪು ಕಾರ್ಯಕ್ರಮ  ಶುಕ್ರವಾರ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಿತು. 

 

ಶೈಕ್ಷಣಿಕ ಕ್ಷೇತ್ರಕ್ಕೆ ಯಾವ ಭಾಷೆ ಪ್ರವೇಶಿಸುತ್ತದೆಯೋ ಆ ಭಾಷೆಯ ಮೌಲ್ಯ ಮತ್ತು ವಿಸ್ತಾರಗೊಳ್ಳುತ್ತದೆ. ಇಂತಹ ಕಾರ್ಯಕ್ರಮಗಳು ತುಳು ಭಾಷೆಯನ್ನು ಇನ್ನಷ್ಟು ಶ್ರೀಮಂತಗೊಳಿಸಬಲ್ಲದು.  ತುಳುನಾಡಿನಲ್ಲಿ 160ಕ್ಕೂ ಹೆಚ್ಚಿನ ಕ್ರೀಡೆಗಳಿವೆ. ತುಳುನಾಡಿನ ಔಷದೋಪಚಾರ ವಿಶಿಷ್ಟವಾಗಿದೆ. ಪ್ರತಿಯೊಂದು ಊರಿನ ಹೆಸರಿಗೂ ಪ್ರಾಚೀನ ಇತಿಹಾಸವಿದೆ. ಇದರ ಬಗ್ಗೆ ಅಧ್ಯಯನ ಮಾಡಿ ತುಳುವನ್ನು ಸಮಗ್ರ ನೆಲೆಯಲ್ಲಿ  ಕಟ್ಟುವ ಕೆಲಸವಾಗಬೇಕಿದೆ. ಸುಮಾರು 5,000 ಕ್ಕೂ ಹೆಚ್ಚಿನ ತುಳು ಪುಸ್ತಕಗಳು  ತುಳು ಸಾಹಿತ್ಯ ಅಕಾಡೆಮಿಯಲ್ಲಿ  ಲಭ್ಯವಿದೆ. ಇದರ ಮೂಲಕ ತುಳುನಾಡಿನ ಪರಂಪರೆಯನ್ನು ತಿಳಿದುಕೊಳ್ಳಬಹುದಾಗಿದೆ. ತಾಯಿ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲ ಕಾರ್ಯ ಪ್ರವೃತ್ತರಾಗಬೇಕಿದೆ ಎಂದರು. 

  

ಎಂಆರ್‌ಪಿಎಲ್‌ನ ಜನರಲ್ ಮ್ಯಾನೇಜರ್ ಡಾ. ರುಡಾಲ್ಫ್ ನೋರೊನ್ಹ ಮಾತನಾಡಿ ಒಬ್ಬ ವ್ಯಕ್ತಿಗೆ ತನ್ನ ಸಂಸ್ಕೃತಿ ಮತ್ತು ಭಾಷೆಯ ಬಗ್ಗೆ ಅಭಿಮಾನವಿದ್ದರೆ,  ಆತ ಬದುಕಿನಲ್ಲಿ ಯಾವತ್ತೂ ಸೋಲುವುದಿಲ್ಲ ವಿದೇಶಿ ಪ್ರವಾಸಿಗರು ಮತ್ತು ವ್ಯಾಪಾರಿಗಳು ತುಳುನಾಡಿಗೆ ಭೇಟಿ ಅವರ ಅಭಿಪ್ರಾಯಗಳನ್ನು  ಮಂಡಿಸಿರುವುದರ ಕುರಿತು ತಿಳಿಸಿದರು. 


ಆಳ್ವಾಸ್ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ತುಳು ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಹಿರಿಯರ ಜವಾಬ್ದಾರಿ ಎಷ್ಟಿದೆಯೋ ಅಷ್ಟೇ ಜವಾಬ್ದಾರಿ ಕಿರಿಯರಿಗೂ ಇದೆ.  ಮಂಗಳೂರಿನ ಥಿಯೋಲೊಜಿಕಲ್ ಸೊಸೈಟಿ ಮೂಲಕ ವಿದೇಶಿಯರು ತುಳು ಸಾಹಿತ್ಯಕ್ಕೆ, ತುಳು ಸಂಸ್ಕೃತಿಗೆ ನೀಡಿದ ಕೊಡುಗೆಯನ್ನು ಉಲ್ಲೇಖಿಸಿ, ಶ್ಲಾಘಿಸಿದರು.  


ಕಾರ್ಯಕ್ರಮದ ಅಂಗವಾಗಿ ತುಳುನಾಡಿನ ಪ್ರಾಚೀನ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಸಭಾ ಕರ‍್ಯಕ್ರಮದ ನಂತರ ವಿವಿಧ ಗೋಷ್ಠಿಗಳು ನಡೆದವು.  ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಡೆ, ತುಳುವರ ಸಂಸ್ಕೃತಿ ಯಲ್ಲಿ ತಾಯಿಯ ಸ್ಥಾನ ಮಾನದ ಕುರಿತು, ಬಾಬು ಪಾಂಗಳ, ತುಳು ಮತ್ತು ಕೊರಗ ಭಾಷೆ, ಆಳ್ವಾಸ್ ವಿದ್ಯಾರ್ಥಿ ಹಾಗೂ ಯುವ ಲೇಖಕ ಮಹಮದ್ ರಿಯಾಜ್ ತುಳುನಾಡಿನ ಸಾಮರಸ್ಯ ಪರಂಪರೆ ಕುರಿತು ಮಾತನಾಡಿದರು. ಮೈಮ್ ರಾಮದಾಸ್ ತುಳು ಜಾನಪದ ಹಾಡಿನ ಬಗ್ಗೆ ಮಾತನಾಡಿದರು.


ಕಾರ್ಯಕ್ರಮದಲ್ಲಿ ಆಳ್ವಾಸ್ ಇಂಜಿನಿಯರಿಂಗ್  ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡೀಸ್  ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವೈಶಾಲಿ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ತುಳು ಸಂಘದ ಸಂಯೋಜಕ ಹೇಮಂತ್ ಸುವರ್ಣ ವಂದಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top