ಹಿರಿಯಡ್ಕದ ಸೋದರಿಯರಿಬ್ಬರು ನಾಪತ್ತೆ

Chandrashekhara Kulamarva
0
                                                                             ಮಂಜುಳಾ
ಉಡುಪಿ:ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಮಂಜುಳಾ  5 ಅಡಿ 1 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಹಾಗೂ ಕಳೆದ 10 ವರ್ಷದ ಹಿಂದೆ ಮದುವೆಯಾಗಿದ್ದು, 2 ವರ್ಷಗಳಿಂದ ತವರು ಮನೆಯಲ್ಲಿಯೇ ವಾಸವಾಗಿದ್ದರು.

ಮಲ್ಲಿಕಾ

ಮಲ್ಲಿಕಾ  5 ಅಡಿ ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು,  ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಹಾಗೂ ಹತ್ತನೇ ತರಗತಿ ವರೆಗೆ ಶಾಲೆಗೆ ಹೋಗಿದ್ದಾರೆ. ಇವರಿಬ್ಬರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷರಿಗೆ ಮಾಹಿತಿ ನೀಡಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top